ಬೀದರ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ಚೆಕ್ಪೋಸ್ಟ್ ನಿರ್ಮಿಸುವ ಮೂಲಕ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅದರಂತೆ ಇದೀಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೆಳ್ಳಿ, ಹಣವನ್ನ ಜಪ್ತಿ ಮಾಡಲಾಗಿದ್ದು, ಇದೀಗ ಮಹಾರಾಷ್ಟ್ರ ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ 142 ಕೆ.ಜಿ ಬೆಳ್ಳಿಯ ಕಾಲು ಚೈನುಗಳು ಸೇರಿ 1 ಕೋಟಿ 5 ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣಗಳ ಜೊತೆಗೆ ಕಾರು ಕೂಡ ಜಪ್ತಿ ಮಾಡಲಾಗಿದೆ.ಅಪಾರ ಪ್ರಮಾಣದಲ್ಲಿ ಯಾವುದೇ ದಾಖಲೆ ಇಲ್ಲದ ಕೋಟ್ಯಂತರ ರೂಪಾಯಿ ನಗದು, ಹಾಗೂ ಬೆಳ್ಳಿ ಆಭರಣಗಳು ರಾಜ್ಯಕ್ಕೆ ಬರುತ್ತಿದೆ. ಒಟ್ಟು 8 ಬ್ಯಾಗ್ ಗಳಲ್ಲಿ 142 ಕೆಜಿ ಬೆಳ್ಳಿಯ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗಜಾನನ ಎಂಬವರಿಗೆ ಸೇರಿದ ಕಾರಿನಲ್ಲಿ ಅಪಾರ ಪ್ರಮಾಣದ ಬೆಳ್ಳಿಯ ಕಾಲು ಚೈನುಗಳು ಪತ್ತೆಯಾಗಿವೆ.ಕಾರಿನ ಮಾಲೀಕರು ನಿಖರವಾದ ದಾಖಲೆಗಳು ನೀಡದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಅಕ್ರಮವಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬೆಳ್ಳಿ ಆಭರಣ ಸಾಗಿಸುತ್ತಿದ್ದಾಗ ಜಪ್ತಿ ಮಾಡಲಾಗಿದ್ದು, ಅನಿಲ್, ಗಜಾನನ, ರಾಹುಲ್ ವಿರುದ್ಧ FIR ದಾಖಲಾಗಿದೆ.