ನವದೆಹಲಿ ಡಿ.6:ಮಧ್ಯಪ್ರದೇಶ((Madhya Pradesh) , ಛತ್ತೀಸ್‌ಗಢ(Chattisgarh) ಹಾಗೂ ರಾಜಸ್ಥಾನ(Rajastan) ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ(Assembly election) ಗೆದ್ದ ಇಬ್ಬರು ಕೇಂದ್ರ ಸಚಿವರು ಸೇರಿದಂತೆ,ಹತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಲೋಕಸಭೆ ಸಂಸದರು ಬುಧವಾರ ಲೋಕಸಭೆಗೆ ರಾಜೀನಾಮೆ ನೀಡಿದ್ದಾರೆ.ಬುಧವಾರ ಜೆಪಿ ನಡ್ಡಾ ಹಾಗೂ ಪ್ರಧಾನಿ ಮೋದಿ ಭೇಟಿ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.ಸಂಸದರಾದ ನರೇಂದ್ರ ಸಿಂಗ್ ತೋಮರ್, ಪ್ರಲ್ಹಾದ್ ಸಿಂಗ್ ಪಟೇಲ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಹಾಗೂ ರಿತಿ ಪಾಠಕ್ ಮಧ್ಯಪ್ರದೇಶ ಚುನಾವಣೆಯಲ್ಲಿ ಗೆಲುವು ಕಂಡಿದ್ದರೆ, ಅರುಣ್ ಸಾವೋ ಹಾಗೂ ಗೋಮತಿ ಸಾಯಿ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಗೆಲುವು ಸಾಧಿಸಿದ್ದರು. ಇನ್ನು ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, ದಿಯಾ ಕುಮಾರಿ ಹಾಗೂ ಕಿರೋಡಿ ಲಾಲ್ ಮೀನಾ ರಾಜೀನಾಮೆ ನೀಡಿದ್ದಾರೆ.ರಾಜಸ್ಥಾನದ ಚುನಾವಣೆಯಲ್ಲಿ ಗೆಲುವು ಕಾಣುವ ಮೂಲಕ ವಿಧಾನಸಭೆಗೆ ಆಯ್ಕೆಯಾಗಿದ್ದರು.