ಬೆಂಗಳೂರು;ಫಲಕಗಳಲ್ಲಿ ಕನ್ನಡ ಕಡ್ಡಾಯ ಪ್ರತಿಭಟನೆ ವೇಳೆ ಕನ್ನಡ ರಕ್ಷಣಾ ವೇದಿಕೆ(Kannada Defense Forum) ಕಾರ್ಯಕರ್ತರು ಪೊಲೀಸರಿಗೆ ಥಳಿಸಿದ್ದಾರೆ ಎಂಬ ಆರೋಪದಲ್ಲಿ ಕರವೇಯ ನಾರಾಯಣ ಗೌಡ(Naryangouda) ಹಾಗೂ 29 ಕಾರ್ಯಕರ್ತರನ್ನು ನ್ಯಾಯಾಂಗ(Judiciary) ಬಂಧನಕ್ಕೆ ನೀಡಲಾಗಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ಕರವೇ ಕಾರ್ಯಕರ್ತರನ್ನು ತಡೆಯುವ ಕೆಲಸ ಮಾಡಿದ್ದರು. ಈ ವೇಳೆ ಪೊಲೀಸರಿಗೆ ಹಲ್ಲೆ ಮಾಡಿದ್ದರು ಎಂದು ಆರೋಪವಿದೆ. ಈ ಬಗ್ಗೆ ದೇವನಹಳ್ಳಿ JMFC ಕೋರ್ಟ್ ನ್ಯಾಯಾಧೀಶರ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ (judicial custody) ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಕರವೇ ನಾರಾಯಣ ಗೌಡ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಹೆದ್ದಾರಿ ತಡೆ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, (IPC 353) ರಡಿ ಪ್ರಕರಣವನ್ನು ನಾರಾಯಣ ಗೌಡ ಸೇರಿ ಸಂಘಟನೆಯ ಇನ್ನಿತರ ಕಾರ್ಯಕರ್ತರ ಮೇಲೆ ದಾಖಲು ಮಾಡಿಕೊಳ್ಳಲಾಗಿದೆ.ಕರವೇ ನಾರಾಯಣ ಗೌಡ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಹೆದ್ದಾರಿ ತಡೆ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, (IPC 353) ರಡಿ ಪ್ರಕರಣವನ್ನು ನಾರಾಯಣ ಗೌಡ ಸೇರಿ ಸಂಘಟನೆಯ ಇನ್ನಿತರ ಕಾರ್ಯಕರ್ತರ ಮೇಲೆ ದಾಖಲು ಮಾಡಿಕೊಳ್ಳಲಾಗಿದೆ. ನಾರಾಯಣ ಗೌಡರ ಜತೆ 29 ಮಂದಿಯನ್ನು ಜೈಲಿಗೆ ಹಾಕಲಾಗಿದೆ


