22.6 C
Bengaluru
Saturday, July 27, 2024

ಟಿಹೆಚ್‌ ಡಿಸಿಎಲ್‌ ಜತೆ 15,000 ಕೋಟಿ ರೂ. ವಿದ್ಯುತ್ ಯೋಜನೆಗಳ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ

#15,000 crore #THDCL #stategovernment #Agreement #Powerprojects

ಬೆಂಗಳೂರು; ರಾಜ್ಯದಲ್ಲಿ ವಿವಿಧ ವಿದ್ಯುತ್‌ ಯೋಜನೆಗಳ ಜಾರಿಗಾಗಿ ಕೇಂದ್ರ ಸರ್ಕಾರ ಸ್ವಾಮ್ಯದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ರಾಜ್ಯ ಕಾಂಗ್ರೆಸ್‌(Congress) ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ರಾಜ್ಯದಲ್ಲಿ ಪಂಪ್ಡ್ ಸ್ಟೋರೇಜ್(Pump storage), ಹೈಡ್ರೋ, ಸೋಲಾರ್ ಸೇರಿದಂತೆ 15,000 ಕೋಟಿ ರೂ. ಮೊತ್ತದ ವಿವಿಧ ಯೋಜೆನಗಳನ್ನು ಕೇಂದ್ರದ ಸಹಭಾಗಿತ್ವದಲ್ಲಿ ಮಾಡಲಾಗುತ್ತದೆ. ಇಂಧನ ಸಚಿವ ಕೆ ಜೆ ಜಾರ್ಜ್ ಅವರ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಪರವಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಟಿಹೆಚ್‌ಡಿಸಿಎಲ್‌(THDCL) ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.“ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಗಳನ್ನು ಪರಿಹರಿಸಲು ಈ ಒಪ್ಪಂದ ಪೂರಕವಾಗಿದ್ದು, ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಎಲ್ಲ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರ ಬದ್ಧ,” ಎಂದು ಇಂಧನ ಸಚಿವರು ತಿಳಿಸಿದರು.1 ಗಿ.ವ್ಯಾ. ಹೈಬ್ರಿಡ್ ಯೋಜನೆ ಮತ್ತು 500 ಮೆಗಾ ವ್ಯಾಟ್‌ ಸಾಮರ್ಥ್ಯದ ಬೀದರ್ ಸೋಲಾರ್ ಪಾರ್ಕ್‌ ಅಭಿವೃದ್ಧಿ ಸಂಬಂಧ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ ಜತೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ. ಟಿಹೆಚ್‌ಡಿಸಿಎಲ್‌ನ ತಾಂತ್ರಿಕ ನಿರ್ದೇಶಕ ಭೂಪೇಂದರ್ ಗುಪ್ತಾ ಹಾಗೂ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಅವರು ಒಪ್ಪಂದ ಪತ್ರ ವಿನಿಮಯ ಮಾಡಿಕೊಂಡರು.ಸಭೆಯಲ್ಲಿ ಟಿಹೆಚ್‌ ಡಿಸಿಎಲ್‌ ಮುಖ್ಯ ವ್ಯವಸ್ಥಾಪಕ ಸಂದೀಪ್ ಸಿಂಘಾಲ್, ಟಿಹೆಚ್‌ಡಿಸಿಎಲ್‌ ಸಹಾಯಕ ಮುಖ್ಯ ವ್ಯವಸ್ಥಾಪಕ ಮಲ್ಲಿಕಾರ್ಜುನ ಉದಯಗಿರಿ, ಟಿಹೆಚ್‌ಡಿಸಿಎಲ್‌ನ ವಿಶೇಷ ಅಧಿಕಾರಿ, ಗುಜರಾತ್ ಸರ್ಕಾರದ ಮಾಜಿ ವಿಶೇಷ ಆಯುಕ್ತ ಎಕೆ ವಿಜಯ್ ಕುಮಾರ್ ಮತ್ತು ಇತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img