ಬೆಂಗಳೂರು: ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 2,000 ರೂ. ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂಬರುವ ಬಜೆಟ್‌ನಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವ ಆರ್ ಅಶೋಕ ತಿಳಿಸಿದ್ದಾರೆ.
ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಜುಲೈನಿಂದ ಅನ್ವಯವಾಗಲಿದೆ.
ಗುಲ್ಬರ್ಗದಲ್ಲಿ ಮಾತನಾಡಿದ ಶಾಸಕ ಆರ್ ಅಶೋಕ್ ವರು ಪ್ರತಿ ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡಲು ಸಹ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ ಮತ್ತು ಮುಂಬರುವ ಬಜೆಟ್ನಲ್ಲಿ ಈ ಯೋಜನೆ ಕುರಿತು ಘೋಷಣೆ ಮಾಡಲಾಗಿದೆ ಮುಖ್ಯಮಂತ್ರಿಗಳು ಜೊತೆ ಒಂದು ಯೋಜನೆ ಕುರಿತು ಮಾತನಾಡಿ ಚರ್ಚೆ ಮಾಡಿ ಪ್ರತಿ ತಿಂಗಳಿಗೆ ನೇರವಾಗಿ ಖಾತೆಗೆ ಜಮಾ ಈ ಸಲಾಗುವುದು. ಹಾಗಾಗಿ ಈ ಬಾರಿಯ ಬಜೆಟ್ ನಲ್ಲಿ ಈ ಯೋಜನೆಯನ್ನು ಘೋಷಿಸುವ ಸಾಧ್ಯತೆಗಳಿದ್ದ, ಇನ್ನೇನು ಕೆಲವೇ ದಿನಗಳಲ್ಲಿ ಇದರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಲಿದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಬಡವರಿಗೆ ಕೊಡುಗೆ ನೀಡಲು ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎರಡು ಸಾವಿರ ರೂಪಾಯಿ ನೀಡುವುದಾಗಿ ಹೇಳಿದೆ. ಇದು ಜುಲೈನಿಂದ ಅನ್ವಯವಾಗುತ್ತದೆ. ಆದರೆ ಅವರ ಸರ್ಕಾರ ಅಧಿಕಾರಕ್ಕೆ ಬರೋದಿಲ್ಲ. ಆದರೆ ನಾವು ತಕ್ಷಣದಿಂದ ಯೋಜನೆಯನ್ನು ಶುರು ಮಾಡುತ್ತೇವೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.