ಬೆಂಗಳೂರು;ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ವರ್ಷಕ್ಕೆ ಮೂರು ಬಾರಿ ಪಾವತಿಸಲಾಗುತ್ತದೆ. ಪ್ರತಿ ತಿಂಗಳಲ್ಲಿ 2,000 ರೂಪಾಯಿಗಳಂತೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಹಣವನ್ನು ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಮೂರು ತಿಂಗಳಲ್ಲಿ ಒದಗಿಸಲಾಗುತ್ತದೆ. ಈ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತಾರೆ. ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣವನ್ನು ಇಂದು( ನವೆಂಬರ್ 15) ಬಿಡುಗಡೆ ಮಾಡಲಾಗಿದೆ,ಜಾರ್ಖಂಡ್‌ನ ಖುಂಟಿಯಲ್ಲಿ ಬಿರ್ಸಾ ಮುಂಡಾ ಜಯಂತಿಯಂದು ‘ಬುಡಕಟ್ಟು ಹೆಮ್ಮೆಯ ದಿನಾಚರಣೆ’ ಕಾರ್ಯಕ್ರಮದಲ್ಲಿ ಬಟನ್ ಒತ್ತುವ ಮೂಲಕ ಅವರು ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಹಸ್ತಾಂತರಿಸಿದ್ದಾರೆ. ಇದರೊಂದಿಗೆ ನೇರ ನಗದು ವರ್ಗಾವಣೆ ಮೂಲಕ ಕೋಟ್ಯಂತರ ರೈತರ ಖಾತೆಗಳಿಗೆ 2000 ರೂ. ತಲುಪಿದೆ.8.5 ಕೋಟಿ ಅರ್ಹ ರೈತರ ಖಾತೆಗಳಿಗೆ 18,000 ಕೋಟಿ ಹಣ ಜಮೆ ಮಾಡಲಾಗಿದೆ.ಆರ್ಥಿಕ ನೆರವು ರೈತರಿಗೆ ತಮ್ಮ ಕೃಷಿ ಮತ್ತು ಇತರ ಅಗತ್ಯಗಳನ್ನು ಪೂರೈಸಲು ನೆರವಾಗುತ್ತಿದೆ. ಲೋಕಸಭೆ ಚುನಾವಣೆಗೂ ಮುನ್ನ ಈ 6,000 ರೂ.ಗಳ ಮೊತ್ತವನ್ನು ಹೆಚ್ಚು ಮಾಡಲೂ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.ಕೇಂದ್ರ ಸರ್ಕಾರದ ಈ ಯೋಜನೆಯಡಿ ಪ್ರತಿ ವರ್ಷ 6,000 ರೂ.ಗಳನ್ನು ದೇಶದ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ಪಾವತಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಅಂದರೆ, ವರ್ಷದಲ್ಲಿ 3 ಕಂತುಗಳಲ್ಲಿ ಈ ಹಣವನ್ನು ಖಾತೆಗಳಿಗೆ ಠೇವಣಿ ಮಾಡಲಾಗುತ್ತದೆ.
ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂದು ತಿಳಿದುಕೊಳ್ಳುವುದು ಹೇಗೆ?
ನೀವು ಯೋಜನೆಯ ಫಲಾನುಭವಿಯಾಗಿದ್ದರೆ ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎಂಬುದನ್ನು ನೀವು ಆನ್‌ಲೈನ್‌ನಲ್ಲಿ ಪರಿಶೀಲಿಸಲು ಇಲ್ಲಿರುವ ಹೇಳಿದ ವೆಬ್‌ಸೈಟ್ pmkisan.gov.in ಭೇಟಿ ನೀಡಿ. ಪೇಜ್‌ನ ಬಲ ಬದಿಯಲ್ಲಿ ‘Know Your Status’ ಆಯ್ಕೆಯನ್ನು ಒತ್ತಿ, ರಿಜಿಸ್ಟ್ರೇಷನ್ ನಂಬರ್ ಮತ್ತು ಕ್ಯಾಪ್ಚ ಕೋಡ್ ಅನ್ನು ನಮೂದಿಸಿ ‘Get Data’ ಎಂಬ ಆಪ್ಷನ್ ಅನ್ನು ಕ್ಲಿಕ್ ಮಾಡಿ. ಆಗ ಫಲಾನುಭವಿಯ ವಿವರ, ಹಣ ಜಮೆಯಾದ ಬಗ್ಗೆ ಒಂದಷ್ಟು ಮಾಹಿತಿಗಳು ಬರುತ್ತವೆ.