21.2 C
Bengaluru
Tuesday, July 16, 2024

2024ರ ಲೋಕಸಭಾ ಚುನಾವಣೆ: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ-ಬಿ.ಎಸ್.ಯಡಿಯೂರಪ್ಪ

ನವದೆಹಲಿ;ಕರ್ನಾಟಕದಲ್ಲಿ 2024 ರ ಲೋಕಸಭೆ ಚುನಾವಣೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪಕ್ಷ ಜನತಾ ದಳ (ಜಾತ್ಯತೀತ) ಜೊತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೈತ್ರಿ ಮಾಡಿಕೊಳ್ಳಲಿದೆ.ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ರಚನೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ನಾಲ್ಕು ಸ್ಥಾನಗಳಿಗೆ ಒಪ್ಪಂದವಾಗಿದೆ, ಜೆಡಿಎಸ್‌ಗೆ ನಾಲ್ಕು ಲೋಕಸಭಾ ಸ್ಥಾನಗಳನ್ನು ನೀಡಲು ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.ಫ್ರೀಡಂ ಪಾರ್ಕಿನ ಮೈದಾನದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಪಕ್ಷದ ನಾಯಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರುಜೂನ್ 1996 ಮತ್ತು ಏಪ್ರಿಲ್ 1997 ರ ನಡುವೆ ಪ್ರಧಾನಿಯಾಗಿದ್ದ ಎಚ್‌ಡಿ ದೇವೇಗೌಡರು ಕರ್ನಾಟಕದಲ್ಲಿ ಐದು ಲೋಕಸಭಾ ಸ್ಥಾನಗಳನ್ನು ಕೋರಿದ್ದಾರೆ. ಅಂತಿಮ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕರ್ನಾಟಕದಲ್ಲಿ ನಾಲ್ಕು ಲೋಕಸಭಾ ಸ್ಥಾನ ಬಿಟ್ಟುಕೊಡುವಂತೆ ದೇವೇಗೌಡರು ಬೇಡಿಕೆ ಇಟ್ಟಿದ್ದಾರೆನ್ನಲಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ಸಮ್ಮತಿಸಿದ್ದು, ಇನ್ನೊಂದು ಕ್ಷೇತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕವು ಒಟ್ಟು 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. 2019 ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಪಕ್ಷದ ಬೆಂಬಲಿತ ಅಭ್ಯರ್ಥಿ ಕೂಡ ವಿಜಯಶಾಲಿಯಾದರು. ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌(ಬೆಂಗಳೂರು ಗ್ರಾಮಾಂತರ0 ಮತ್ತು ಜೆಡಿಎಸ್‌(ಹಾಸನ) ತಲಾ ಒಂದು ಕ್ಷೇತ್ರದಲ್ಲಿ ಜಯ ಗಳಿಸಿತ್ತು.ಕರ್ನಾಟಕದಲ್ಲಿ ಬಿಜೆಪಿಗೆ ಲಿಂಗಾಯತ ಬೆಂಬಲವಿದೆ. ರಾಜ್ಯದಲ್ಲಿನ ಇತರೆ ಪ್ರಬಲ ಜಾತಿಯಾದ ಒಕ್ಕಲಿಗರಲ್ಲಿ ಪ್ರಬಲ ನೆಲೆ ಹೊಂದಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ.ಈ ಮೈತ್ರಿ ಎರಡೂ ಪಕ್ಷಗಳಿಗೆ ಲಾಭದಾಯಕ ಮತ್ತು ಮುಂಬರುವ ಚುನಾವಣೆಯಲ್ಲಿ ತಮ್ಮ ಅವಕಾಶಗಳನ್ನು ಹೆಚ್ಚಿಸುವ ನಿರೀಕ್ಷೆಯಿದೆ.

Related News

spot_img

Revenue Alerts

spot_img

News

spot_img