Revenue Facts

ರಾಜ್ಯದಲ್ಲಿ 7 ಕಂಪನಿಗಳೊಂದಿಗೆ 22,000 ಕೋಟಿ ರೂಪಾಯಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯದ ಅಂಕಿತ

#22,000 crore #worth of investment #proposals # state # 7 companies

ಬೆಂಗಳೂರು: ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಏಳು ಕಂಪನಿಗಳೊಂದಿಗೆ 22,000 ಕೋಟಿ ರೂಪಾಯಿಗಳ ಹೂಡಿಕೆ(Investment) ಪ್ರಸ್ತಾವನೆಗಳೊಂದಿಗೆ ಎಂಒಯುಗಳಿಗೆ ಸಹಿ ಹಾಕಿರುವುದಾಗಿ ಕರ್ನಾಟಕ ಸರ್ಕಾರ ಬುಧವಾರ ತಿಳಿಸಿದೆ.ರಾಜ್ಯದ ರಾಜಧಾನಿಯಲ್ಲಿ ವೆಬ್ ವರ್ಕ್ಸ್ ಕಂಪನಿ ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್(Data center park) ಸ್ಥಾಪನೆ ಮಾಡಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.ಸ್ವಿಟ್ಸರ್ಲೆಂಡ್‌ನ ದಾವೋಸ್(Davos) ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಕೈಗಾರಿಕಾ ಸಚಿವ ಎಂಬಿ ಪಾಟೀಲ ನೇತೃತ್ವದ ನಿಯೋಗ ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.ವೆಬ್ ವರ್ಕ್ಸ್ ಕಂಪನಿಯು ಬೆಂಗಳೂರಿನಲ್ಲಿ 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್ ನಿರ್ಮಿಸಲಿದೆ. ಅಲ್ಲದೆ ಮೈಕ್ರೋಸಾಫ್ಟ್, ಹಿಟಾಚಿ, ಲುಲು ಗ್ರೂಪ್, ಡ್ಯೂಲೆಟ್ ಪೆಕಾರ್ಡ್ (HP), ಹನಿವೆಲ್, ಐನಾಕ್ಸ್, ವೋಲ್ಲೋ, ನೆನ್ನೆ, ಕಾಯಿನ್ ಬೇಸ್, ಟಕೇಡಾ ಫಾರ್ಮಾ, ಬಿಎಲ್ ಆಗೋ ಕಂಪನಿಗಳ 2,000 ಕೋಟಿ ರೂ. ಮೌಲ್ಯದ ಹೂಡಿಕೆಗಳಿಗೆ ಸರ್ಕಾರ ಸಹಿ ಹಾಕಿದೆ ಎಂದು ತಿಳಿಸಿದರು.ಮೈಕ್ರೋಸಾಫ್ಟ್ ಕಂಪನಿಯು ಡಿಜಿಟಲ್ ಉತ್ಪಾದಕತೆ, ಉದ್ಯಮಶೀಲತೆ ಮತ್ತು ಸಂವಹನಕ್ಕೆ ಸಂಬಂಧಿಸಿದಂತೆ ತನ್ನ ಮೈಕ್ರೋಸಾಫ್ಟ್ ರೈಸ್ ಡಿಜಿಟಲ್ ಸ್ಕಿಲ್ಲಿಂಗ್ ಸೌಲಭ್ಯದ ಮೂಲಕ 70 ಗಂಟೆಗಳ ವರ್ಚುಯಲ್ ತರಬೇತಿ ಕೊಡಲಿದೆ. ಅಭ್ಯರ್ಥಿಗಳಿಗೆ ಮೈಕ್ರೋಸಾಫ್ಟ್ ಟ್ರೈನಿಂಗ್ ಪ್ಲಾಟ್- ಫಾರಂ ಮೂಲಕ 150 ಗಂಟೆಗಳ ಹೆಚ್ಚುವರಿ ಕೌಶಲ್ಯಾಭಿವೃದ್ಧಿ ಪಠ್ಯ ಸಾಮಗ್ರಿ ಸಿಗಲಿದೆ,ಟಕೆಡಾ ಫಾರ್ಮಾಸ್ಯುಟಿಕಲ್ಸ್ ಬೆಂಗಳೂರಿನಲ್ಲಿ ಜಾಗತಿಕ ನಾವೀನ್ಯತೆ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ ಮತ್ತು ಸೂಕ್ತವಾದ ಕ್ಯಾಂಪಸ್ ಸ್ಥಳಗಳಿಗಾಗಿ ಸಕ್ರಿಯವಾಗಿ ಶೋಧಿಸುತ್ತಿದೆ ಎಂದು ಅದು ಹೇಳಿದೆ.

Exit mobile version