Revenue Facts

NIA ಶೋಧ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿ 24 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ

NIA ಶೋಧ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿ 24 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ

#NIA #Banglore #bangla #immigrants #search

ಬೆಂಗಳೂರು;ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ 24 ಬಾಂಗ್ಲಾದೇಶಿ ಪ್ರಜೆಗಳನ್ನುರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿದ್ದು, ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ ,ಬ್ರೋಕರ್‌ಗಳಿಗೆ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ತಲಾ 20 ಸಾವಿರ ರೂ. ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಭಾರತಕ್ಕೆ ಅಕ್ರಮವಾಗಿ ಭಾರತಕ್ಕೆ ಅಕ್ರಮ ವಲಸಿಗರು ಭಾರತದ ಆಧಾರ್ ಸೇರಿದಂತೆ ಹಲವು ಐಡಿ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬೆಳ್ಳಂದೂರು ಪೊಲೀಸ್ ಪ್ರಕರಣ ದಾಖಲಾಗಿದೆ. ಎನ್‌ಐಎ ಅಧಿಕಾರಿಗಳ ದೂರಿನ ಅನ್ವಯ ಫಾರಿನರ್ ಆಕ್ಟ್, ಪಾಸ್‌ಪೋರ್ಟ್‌ ಆಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.ಶೋಧ ಕಾರ್ಯಾಚರಣೆಯಲ್ಲಿ ಮೂವರು ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್ ಮತ್ತು ಮೊಹಮ್ಮದ್ ಜಹೀದ್ ಅವರನ್ನು ಎನ್‌ಐಎ ಪತ್ತೆ ಹಚ್ಚಿದೆ. 2011 ರಿಂದ ಬೆಳ್ಳಂದೂರು ಪೊಲೀಸರ ವಶದಲ್ಲಿರುವ ವಲಸಿಗರು ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

Exit mobile version