Revenue Facts

3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್‌ಟಿಒ ಅಧಿಕಾರಿ, ಅಟೆಂಡರ್

3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್‌ಟಿಒ ಅಧಿಕಾರಿ, ಅಟೆಂಡರ್

#3 thousand # RTO officer# attendant #fell # Lokayukta #trap # accepting# bribe

ಚಿಕ್ಕಮಗಳೂರು;ಚಿಕ್ಕಮಗಳೂರು ಆರ್ ಟಿಒ ಕಚೇರಿಯಲ್ಲಿ ರೆಂಟೆಡ್ ಬೈಕಿಗೆ(Rented bike) ಪರವಾನಗಿ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಆರ್’ಟಿಒ(RTO) ಮತ್ತು ಅಟೆಂಡರ್ ಲೋಕಾಯುಕ್ತ(Lokayukta) ಪೋಲೀಸರ ಬಲೆಗೆ ಬಿದ್ದಿದ್ದಾರೆ.ಪ್ರಾದೇಶಿಕ ಸಾರಿಗೆ ಅಧಿಕಾರಿ(Regional Transport Officer) ಮಧುರಾ ಹಾಗೂ ಕಚೇರಿಯ ಅಟೆಂಡರ್ ಲತಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರಾಗಿದ್ದು, ನಗರದ ಕೆಂಪನಹಳ್ಳಿ ಬಡಾವಣೆ ನಿವಾಸಿ ಪ್ರಕಾಶ್ ಎಂಬವರು 8 ಬಾಡಿಗೆ ವಾಹನಗಳನ್ನು ಓಡಿಸಲು ಆರ್’ಟಿಒ(RTO) ಕಚೇರಿಯಿಂದ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ಪ್ರಕಾಶ್ ಅವರ ಅರ್ಜಿಯನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಆರ್‍ಟಿಒ ಕಚೇರಿಗೆ ತೆರಳಿ ಅರ್ಜಿ ತಿರಸ್ಕಾರ ಸಂಬಂಧ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಮಧು ಅವರನ್ನು ಪ್ರಶ್ನಿಸಿದ್ದರು. ಈ ವೇಳೆ ಅವರು ಪ್ರತೀ ವಾಹನಕ್ಕೆ ತಲಾ 1 ಸಾವಿರದಂತೆ 8 ಸಾವಿರ ಹಣ ನೀಡಬೇಕೆಂದು ಲಂಚಕ್ಕೆ(Bribe) ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ. ನಂತರ ಪ್ರಕಾಶ್ 5 ವಾಹನಗಳಿಗೆ ಪರವಾನಿಗೆ(license) ನೀಡಬೇಕೆಂದು ಮತ್ತೆ ಅರ್ಜಿ ಸಲ್ಲಿಸಿ ಅದಕ್ಕೆ ಶುಲ್ಕವನ್ನೂ ಪಾವತಿಸಿದ್ದರು. ಅಲ್ಲದೇ ಮುಂಗಡವಾಗಿ(Advance) 2 ಸಾವಿರ ರೂ. ಲಂಚವನ್ನು(Bribe) ಅಧಿಕಾರಿಗಳಿಗೆ ನೀಡಿದ್ದರೆಂದು ತಿಳಿದು ಬಂದಿದ್ದು, ಬಾಕಿ 3 ಸಾವಿರ ಹಣಕ್ಕೆ ಅಧಿಕಾರಿಗಳಿಬ್ಬರು ಪೀಡಿಸಿದ್ದರಿಂದ ಬೇಸತ್ತ ಪ್ರಕಾಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ದೂರಿನ ಮೇರೆಗೆ ಸೋಮವಾರ RTO ಕಚೇರಿಯಲ್ಲಿ ರೆಡ್ ಹ್ಯಾಂಡಾಗಿ ಆರ್ ಟಿಒ ಮಧುರಾ ಮತ್ತು ಅಟೆಂಡರ್ ಲತಾ ಸಿಕ್ಕಿ ಬಿದ್ದಿದ್ದಾರೆ.3000 ರೂ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಫೈಲ್ ಪೆಂಡಿಂಗ್ ಇಟ್ಟು ಬೈಕಿಗೆ 1000 ರೂ.ನಂತೆ 8 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಮಧುರಾ ಅಟೆಂಡರ್ ಮೂಲಕ ವ್ಯವಹಾರ ನಡೆಸುತ್ತಿದ್ದರು ಎಂಬ ಮಾಹಿತಿ ದೊರೆತಿದೆ.

Exit mobile version