22.9 C
Bengaluru
Friday, July 5, 2024

ವಿದೇಶಿ ಪ್ರಜೆ ಸೇರಿ 34 ಡ್ರಗ್ ಪೆಡ್ಲರ್​ಗಳ ಬಂಧನ

ಬೆಂಗಳೂರು;ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 34 ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.ವಿದೇಶಿ ಪ್ರಜೆ ಸೇರಿ 34 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 2 ಕೋಟಿ 42 ಲಕ್ಷಕ್ಕೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. 24 ಪ್ರಕರಣಗಳ ಸಂಬಂಧ 34 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಕೇರಳ ಮೂಲದ 15, ರಾಜ್ಯದ 10, ಬಿಹಾರದ ನಾಲ್ವರು ಆರೋಪಿಗಳು, ಒಡಿಶಾದ ಇಬ್ಬರು, ಅಸ್ಸಾಂ & ಹರಿಯಾಣ ಮೂಲದ ತಲಾ ಒಬ್ಬರು, ನೈಜೀರಿಯಾ ಪ್ರಜೆಯನ್ನು ಬಂಧಿಸಿ ಡ್ರಗ್ಸ್​ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಗಾಂಜಾ, ಎಂಡಿಎಂ, 30 ಮೊಬೈಲ್ ಫೋನ್, 5 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.ಬಂಧಿತರಿಂದ 2 ಕೋಟಿ 42 ಲಕ್ಷಕ್ಕೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

Related News

spot_img

Revenue Alerts

spot_img

News

spot_img