ಮೈಸೂರು :ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾದ ಹಿನ್ನಲೆಯಲ್ಲಿ ಮಹಿಳಾ & ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ತಮ್ಮ ಸ್ವಂತ ಖಾತೆಯಿಂದ ನಾಡ ದೇವತೆ ಚಾಮುಂಡೇಶ್ವರಿ ತಾಯಿಗೆ ಕಾಣಿಕೆ ಅರ್ಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೇಯ ಪರವಾಗಿ ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿಗೆ ಪ್ರತಿ ತಿಂಗಳ 2 ಸಾವಿರ ರೂ.ನಂತೆ ಒಟ್ಟು 59 ತಿಂಗಳಿಗೆ 1,18,000 ರೂ. ಹಣವನ್ನು ಅರ್ಪಿಸಲಾಗಿದೆ .ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬ್ಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.