21.1 C
Bengaluru
Monday, December 23, 2024

ಕನ್ನಡ ಪ್ರಾಧಿಕಾರ ಪುಸ್ತಕಗಳಿಗೆ ಶೇ.50 ರಿಯಾಯಿತಿ

ಬೆಂಗಳೂರು;ಕನ್ನಡ ಪ್ರಾಧಿಕಾರ ಪುಸ್ತಕಗಳಿಗೆ ಶೇ.50 ರಿಯಾಯಿತಿ ಗಣರಾಜ್ಯೋತ್ಸವದ ದಿನದ ಅಂಗವಾಗಿ ಜನವರಿ ಪೂರ್ಣ ತಿಂಗಳು ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪ್ರಕಟಣೆಗಳು ಶೇ.50 ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟವಾಗಲಿವೆ. ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ & ಎಲ್ಲ ಜಿಲ್ಲೆಗಳ ಕನ್ನಡ & ಸಂಸ್ಕೃತಿ ಇಲಾಖೆಯ ನಿರ್ದೇಶಕರ ಕಚೇರಿಯಲ್ಲಿ ಸೇರಿ ಕನ್ನಡ ಪುಸ್ತಕ ಪ್ರಾಧಿಕಾರ ಮಳಿಗೆಗಳಲ್ಲಿ ಸೌಲಭ್ಯ ಸಿಗಲಿದೆ.ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ www.kannadapustakapradhikara. com ನಲ್ಲಿ ಸಹ ಈ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ. 080-22107705ಗೆ ಸಂಪರ್ಕಿಸಬಹುದು.ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

Related News

spot_img

Revenue Alerts

spot_img

News

spot_img