25.3 C
Bengaluru
Friday, July 5, 2024

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

#50%#discount #publications#Kannada #bookauthority

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

Related News

spot_img

Revenue Alerts

spot_img

News

spot_img