Revenue Facts

ಶೀಘ್ರದಲ್ಲೇ ಐದು ಸಾವಿರ ಬಸ್ ಖರೀದಿ,13,000 ಸಾರಿಗೆ ಸಿಬ್ಬಂದಿ ನೇಮಕ

ಬೆಂಗಳೂರು;ನಾಲ್ಕು ನಿಗಮಗಳಲ್ಲಿ ಇನ್ನು ಒಂದು ವರ್ಷದ ಅವಧಿಯಲ್ಲಿ 5 ಸಾವಿರ ಹೊಸ ಎಸ್‌ಗಳನ್ನು ಖರೀದಿ ಮಾಡಲಾಗುವುದು. 13 ಸಾವಿರ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿ ಮುಂಭಾಗ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಟಾಟಾ ಮೋಟಾರ್ಸ್‌ ಲಿಮಿಟೆಡ್ ಬಿಎಂಟಿಸಿಗೆ ಹಸ್ತಾಂತರ ಮಾಡಿರುವ ಮೊದಲ ಎಲೆಕ್ಟಿಕ್ ಪ್ರೋಟೊಟೈಪ್ ಬಸ್‌ಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸೇವೆಯನ್ನು ಉತ್ತಮಗೊಳಿಸುವ ಸಲುವಾಗಿ ನಾಲ್ಕೂ ನಿಗಮಗಳಿಗೆ 5 ಸಾವಿರ ಬಸ್ ಗಳನ್ನು ಖರೀದಿ, ಅದರಲ್ಲಿ ಬಿಎಂಟಿಸಿಗೆ ಹೊಸದಾಗಿ 1 ಸಾವಿರ ಬಸ್ ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಿದರು. ಸರ್ಕಾರ ಸಮ್ಮತಿದ ಕೂಡಲೇ ಚಾಲಕರು, ನಿರ್ವಾಹಕರು ಮತ್ತು ಮೆಕ್ಯಾನಿಕ್‌ಗಳು ಸೇರಿ ಒಟ್ಟು 13,000 ಸಾರಿಗೆ ಸಿಬ್ಬಂದಿಗಳ ನೇಮಕಕ್ಕೆ ಶೀಘ್ರವೇ ಅಧಿಸೂಚನೆ ಹೊರಡಿಲಾಗುತ್ತದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.ಸರ್ಕಾರವು ಅನುಮತಿ ನೀಡಿದ ಬಳಿಕ, ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದರು.

Exit mobile version