ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ಉಪನೋಂದಣಾಧಿಕಾರಿ ಕಚೇರಿ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಜಾಗ ಮತ್ತು ಹಣ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಶಿರಾ ಉಪನೋಂದಣಾಧಿಕಾರಿ ಕಚೇರಿಗಾಗಿ ಶಿರಾ ತಾಲ್ಲೂಕು ಕಸಬಾ ಹೋಬಳಿಯ ಮುದಿಗೆರೆ ಕಾವಲ್ ಗ್ರಾಮದ ಸರ್ವೆ ಸಂಖ್ಯೆ 580ರಲ್ಲಿ 5 ಗುಂಟೆ ನಿವೇಶನ ಮಂಜೂರು ಮಾಡಲಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕಾಗಿ 60 ಲಕ್ಷ ರೂಗಳನ್ನು ತುಮಕೂರು ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಮುದಿಗೆರೆ ಕಾವಲ್ ಗ್ರಾಮದಲ್ಲಿ ಸಬ್‌ರಿಜಿಸ್ಟ್ರಾರ್ ಕಚೇರಿ ನಿರ್ಮಾಣಕ್ಕಾಗಿ 5 ಗುಂಟೆ ಜಮೀನು ಮತ್ತು 122.45 ಲಕ್ಷ ರೂ.ಗಳ ಬಿಡುಗಡೆ ಮಾಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆ ಪರಿಶೀಲಿಸಿ ಸರ್ಕಾರ 60 ಲಕ್ಷ ರೂ. ಮಂಜೂರು ಮಾಡಲಾಗಿದೆ.