ಗದಗ : ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಗೆ ಜಾಮೀನು ಕೊಡಿಸಲು ಲಂಚ ಪಡೆಯುತ್ತಿದ್ದ ಪಿಎಸ್ಐ ಸಹಿತ ಮೂವರು ಪೊಲೀಸ್ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣೆ ಪಿಎಸ್ಐ ರಾಘವೇಂದ್ರ ಹಾಗೂ ಪೊಲೀಸ್ ಪೇದೆಗಳಾದ ಮಲ್ಲು ಕುರಿ, ಶರಣಪ್ಪ ಭಜಂತ್ರಿ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಎಸ್ ಮತ್ತು ಇಬ್ಬರು ಕಾನ್ಸ್‌ಟೇಬಲ್‌ಗಳು ಗಜೇಂದ್ರಗಡ ಪಟ್ಟಣದ ದಾಭಾದಲ್ಲಿ ಬೆಟ್ಟಿಂಗ್ ದಂಧೆಕೋರರಿಂದ 1 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಸದ್ಯ ಮೂವರು ಪೊಲೀಸರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ,ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನೀಡಲು ಪಿಎಸ್ಐ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ವಿನಾಯಕ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿ ಲಂಚದ ಹಣದ ಪೈಕಿ 1 ಲಕ್ಷ ನೀಡಲು ಪಟ್ಟಣದಲ್ಲಿರುವ ಧಾಬಾಕ್ಕೆ ತೆರಳಿದ್ದಾರೆ.
ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಿಗೆ ಜಾಮೀನು ಕೊಡಿಸಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂದೆಧ ಹಿನ್ನೆಲೆಯಲ್ಲಿ ಗಜೇಂದ್ರಗಡ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ 2 ಲಕ್ಷ ಬೇಡಿಕೆ ಇಡಲಾಗಿದೆ ಎಂದು ದೂರು ದಾಖಲಿಸಲಾಗಿತ್ತು.ಪಿಎಸ್‌ಐ ಒಂದೂವರೆ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅದರಂತೆ, ಹಣ ಪಡೆಯುವಾಗ ಧಾರವಾಡ ಲೋಕಾಯುಕ್ತ ಎಸ್.ಪಿ.ಸತೀಶ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪಿಎಸ್ಐ ಮತ್ತು ಇಬ್ಬರು ಪೇದೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.