26.4 C
Bengaluru
Monday, December 23, 2024

ಭಜರಂಗದಳ ಹೇಳಿಕೆಗೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ

ಬೆಂಗಳೂರು, ಮೇ. 15;ಹಿಂದೂ ಸುರಕ್ಷಾ ಪರಿಷತ್‌ನ ಸಂಸ್ಥಾಪಕ ಹಿತೇಶ್ ಭಾರದ್ವಾಜ್ ಅವರು ಸಲ್ಲಿಸಿದ್ದ ನಿಷೇಧಿತ ಇಸ್ಲಾಮಿಕ್‌ ಸಂಘಟನೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI)ಯನ್ನು ಸಂಘ-ಸಂಯೋಜಿತ ವಿಶ್ವ ಹಿಂದೂ ಪರಿಷತ್‌ನ ಯುವ ಘಟಕವಾದ ಬಜರಂಗದಳದೊಂದಿಗೆ ಸಮೀಕರಿಸಿದ ಕಾರಣಕ್ಕಾಗಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಂಜಾಬ್‌ನ ನ್ಯಾಯಾಲಯವು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ನೀಡಿದೆ ಎಂದು  ವರದಿ ಮಾಡಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಕರ್ನಾಟಕ ಚುನಾವಣೆಯ ಪ್ರಚಾರದ ವೇಳೆ ಭಜರಂಗದಳದ ವಿರುದ್ಧ ಮಾಡಿದ ಟೀಕೆಗಳ ವಿರುದ್ಧ ಭಾರದ್ವಾಜ್ ಅವರು ಖರ್ಗೆ ವಿರುದ್ಧ ಪ್ರಕರಣ ದಾಖಲಿಸಿದ್ದರು.ಇನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ರಮಣದೀಪ್ ಕೌರ್ ಜುಲೈ 10 ರಂದು ಖರ್ಗೆ ಅವರಿಗೆ ಸಮನ್ಸ್ ನೀಡಿದ್ದಾರೆ.ಪ್ರಚಾರದ ವೇಳೆ ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು.

Related News

spot_img

Revenue Alerts

spot_img

News

spot_img