24.3 C
Bengaluru
Saturday, December 21, 2024

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಏರಿಕೆ ಸಾಧ್ಯತೆ! 25 ಲಕ್ಷ ಆಸ್ತಿ ಮಾಲೀಕರ ಜೇಬಿಗೆ ಕತ್ತರಿ!

ಬೆಂಗಳೂರು ಮೇ 30:BBMP Property Tax: ಬಿಬಿಎಂಪಿಯು ಆಸ್ತಿ ತೆರಿಗೆ ಹೆಚ್ಚಳ ಮಾಡಲು ಸಮ್ಮತಿ ಸೂಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರವನ್ನು ಕೋರಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲೇ ಬಿಬಿಎಂಪಿ ಈ ಸಂಬಂಧ ಪ್ರಸ್ತಾಪಿಸಿತ್ತು. ಇದೀಗ ಮತ್ತೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಒಂದು ವೇಳೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಅಂಗೀಕಾರ ಮಾಡಿದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪ್ರಮಾಣದಲ್ಲಿ ಏರಿಕೆ ಆಗಲಿದೆ.

ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಸಲ್ಲಿಕೆ
ರಾಜ್ಯ ಸರ್ಕಾರ ಒಪ್ಪಿದರೆ ಶೀಘ್ರದಲ್ಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಏರಿಕೆ
ಆಸ್ತಿ ತೆರಿಗೆ ಹಾಗೂ ಉಪಕರಣಗಳ ಏರಿಕೆಗೆ ಬಿಬಿಎಂಪಿಯಿಂದ ಪ್ರಸ್ತಾವನೆ

ರಾಜ್ಯ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವಂತೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಒಂದು ವೇಳೆ ಬಿಬಿಎಂಪಿಯ ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದರೆ ಬೆಂಗಳೂರಿನ 25 ಲಕ್ಷ ಮಂದಿ ಆಸ್ತಿ ಮಾಲೀಕರ ಜೇಬಿಗೆ ಕತ್ತರಿ ಬೀಳಲಿದ್ದು, ಆಸ್ತಿ ತೆರಿಗೆ ಪ್ರಮಾಣದಲ್ಲಿ ಏರಿಕೆ ಆಗಲಿದೆ.

ಇನ್ನು ಈ ಕುರಿತಾಗಿ ಮಾಹಿತಿ ನೀಡಿರುವ ಡಿಸಿಎಂ ಡಿ. ಕೆ. ಶಿವಕುಮಾರ್, ಬಿಬಿಎಂಪಿಯ ಪ್ರಸ್ತಾವವನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡುವ ಸುಳಿವು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿ. ಕೆ. ಶಿವಕುಮಾರ್, ಆಸ್ತಿ ತೆರಿಗೆ ಹೆಚ್ಚಳ ಪ್ರಸ್ತಾಪವನ್ನು ಅಂಗೀಕರಿಸಬೇಕಿದೆ ಎಂದರು.

ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯು ಆಸ್ತಿ ತೆರಿಗೆ ಹೆಚ್ಚಳ ಮಾಡುವ ಸಂಬಂಧ ವಿಸ್ತೃತ ಪ್ರಸ್ತಾವನೆಯನ್ನು ಸಿದ್ದಪಡಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನವೇ ಆಸ್ತಿ ತೆರಿಗೆ ಹೆಚ್ಚಳ ಪ್ರಸ್ತಾಪ ಸರ್ಕಾರ ಮುಂದೆ ಬಂದಿತ್ತು. ಅಧಿಕಾರಿಗಳು ಆಗಲೇ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಇದೀಗ ನಮಗೂ ನೀಡಿದ್ದಾರೆ ಎಂದು ಹೇಳಿದರು.

ನಾನು ಇದೀಗ ತಾನೇ ಬಿಬಿಎಂಪಿಯ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇನೆ. ಈ ವಿಚರವಾಗಿ ನಾವು ಪರಿಶೀಲನೆ ನಡೆಸುತ್ತೇವೆ. ನಂತರ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ವೇಳೆ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದಲೇ ಅನುದಾನಕ್ಕಾಗಿ ಕಾಯುತ್ತಾ ಕೂರಬಾರದು ಎಂದು ಹೇಳಿದರು. ಕೇಂದ್ರ ಸರ್ಕಾರವು ಈಗಾಗಲೇ ಬೆಂಗಳೂರು ನಗರಕ್ಕೆ ಅನುದಾನ ನೀಡಿಕೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ, ಬಿಬಿಎಂಪಿಯು ತೆರಿಗೆ ಸೋರಿಕೆಯನ್ನು ತಡೆಗಟ್ಟಬೇಕು. ಸೂಕ್ತವಾಗಿ ತೆರಿಗೆ ಸಂಗ್ರಹ ಮಾಡಿ ಅಭಿವೃದ್ದಿ ಕಾರ್ಯಗಳನ್ನು ಮುಂದುವರೆಸಬೇಕು ಎಂದು ಡಿಕೆ ಶಿವಕುಮಾರ್ ತಾಕೀತು ಮಾಡಿದರು.

ವಿವಿಧ ಮೂಲಗಳ ತೆರಿಗೆ ಹಾಗೂ ಆಸ್ತಿ ತೆರಿಗೆ ಸಂಗ್ರಹ ಸಂಬಂಧ ಬಿಬಿಎಂಪಿ ಕೂಡಾ ಗುರಿ ಹಾಕಿಕೊಂಡಿದೆ. 2023-24ರಲ್ಲಿ 4,790 ಕೋಟಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಗುರಿಯನ್ನು ಪಾಲಿಕೆ ಹಾಕಿಕೊಂಡಿದೆ. 2022-23ರಲ್ಲಿ ಪಾಲಿಕೆ 3,800 ಕೋಟಿ ರೂ. ಆಸ್ತಿ ತೆರಿಗೆ ಹಾಗೂ ವಿವಿಧ ಉಪಕರಣಗಳನ್ನು ಸಂಗ್ರಹ ಮಾಡಿತ್ತು. ಆದ್ರೆ, ಕಳೆದ ಆರ್ಥಿಕ ವರ್ಷದಲ್ಲಿ ಪಾಲಿಕೆಯ ತೆರಿಗೆ ಸಂಗ್ರಹ ಗುರಿ 4,189 ಕೋಟಿ ರೂ. ಆಗಿತ್ತು. ಆದ್ರೆ, ಈ ನಿಗದಿತ ಗುರಿ ಸಾಧನೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಸರ್ಕಾರ ಆಸ್ತಿ ತೆರಿಗೆ ಏರಿಕೆ ಮಾಡಿದರೆ ಪಾಲಿಕೆಯ ತೆರಿಗೆ ಸಂಗ್ರಹ ಕೂಡಾ ಹೆಚ್ಚಳ ಆಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೋಮವಾರ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸತತ 3 ಗಂಟೆಗಳ ಕಾಲ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಮೂಲ ಸೌಕರ್ಯ ಅಭಿವೃದ್ಧಿ, ರಸ್ತೆ ನಿರ್ಮಾಣ ಸೇರಿದಂತೆ ಹಲವು ವಿಚಾರಗಳ ಸಂಬಂಧ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳಿಂದ ಡಿಕೆಶಿ ಮಾಹಿತಿ ಪಡೆದರು. ಅಭಿವೃದ್ದಿ ಕಾರ್ಯಗಳ ಫೋಟೋ ಹಾಗೂ ವಿಡಿಯೋ ಸಾಕ್ಷ್ಯಗಳನ್ನು ಎಂಜಿನಿಯರ್‌ಗಳು ನೀಡಿದರು. ಇದೇ ವೇಳೆ ಕಳೆದ 5 ವರ್ಷಗಳಲ್ಲಿ ಕಾರ್ಯಗೊಂಡ ಅಭಿವೃದ್ದಿ ಕಾರ್ಯಗಳ ವಿಸ್ತೃತ ವರದಿ ನೀಡುವಂತೆಯೂ ಅಧಿಕಾರಿಗಳಿಗೆ ಡಿಕೆಶಿ ತಾಕೀತು ಮಾಡಿದರು.

Related News

spot_img

Revenue Alerts

spot_img

News

spot_img