ನವದೆಹಲಿ;ದೇಶದ ಎರಡು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ತೆಲಂಗಾಣ ಹೈಕೋರ್ಟ್‌ನ ಮುನ್ಯಾ ಉಜ್ಜಲ್ ಭುಯಾನ್ ಮತ್ತು ಕೇರಳ ಹೈಕೋರ್ಟ್‌ನ ಮುನ್ಯಾ,ಎಸ್.ವೆಂಕಟನಾರಾಯಣ ಭಟ್ ಅವರನ್ನು ಸರ್ವೋಚ್ಛ ನ್ಯಾಯಾಲಯಕ್ಕೆ ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ 34 ನ್ಯಾಯಾಧೀಶರ ನೇಮಕಕ್ಕೆ ಅನುಮೋದನೆ ನೀಡಲಾಗಿದೆ.ಪ್ರಸ್ತುತ 31 ಮಂದಿ ಇದ್ದಾರೆ. ತೆಲಂಗಾಣ ಮತ್ತು ಕೇರಳದ ಮುಖ್ಯ ನ್ಯಾಯಮೂರ್ತಿಗಳು ಎಲ್ಲಾ ಅರ್ಹತೆಗಳನ್ನು ಹೊಂದಿರುವುದರಿಂದ ಅವರನ್ನು ಸರ್ವಾನುಮತದಿಂದ ಶಿಫಾರಸು ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಒಟ್ಟು ಸಂಖ್ಯಾ ಬಲ 34 ಪ್ರಸ್ತುತ 31 ನ್ಯಾಯಮೂರ್ತಿಗಳು ಸೇವೆ ಸಲ್ಲಿಸುತ್ತಿದ್ದಾರೆ. ನ್ಯಾಯಮೂರ್ತಿ ಕೃಷ್ಣ ಮುರಾರಿ ಜುಲೈ 7 ಶುಕ್ರವಾರ ನಿವೃತ್ತರಾಗಲಿದ್ದು, ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 4ಕ್ಕೆ ಏರಿಕೆಯಾಗಲಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಉಜ್ಜಲ್ ಭುಯಾನ್, ಎಸ್ ವಿ ಭಟ್ಟಿ ಅವರ ನೇಮಕಕ್ಕೆ ಕೊಲಿಜಿಯಂ ಶಿಫಾರಸು
by RF Desk