23.6 C
Bengaluru
Thursday, December 19, 2024

ಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಆಗಸ್ಟ್ 16 ರಂದು ಜಾರಿ:ಸಿಎಂ ಸಿದ್ದರಾಮಯ್ಯ.

ಬೆಂಗಳೂರು ಜುಲೈ 11 : ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, 5 ಗ್ಯಾರಂಟಿಗಳ ಪೈಕಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯಾಗಲಿದೆ ಎಂದು ತಿಳಿಸಿದ್ದಲ್ಲದೆ,ಗೃಹಲಕ್ಷ್ಮೀ ಯೋಜನೆಗೆ ಆ.16 ಕ್ಕೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಂದು ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುಟುಂಬದ ಯಾವ ಯಜಮಾನಿಗೆ ಹಣ ಸಂದಾಯ ಮಾಡಬೇಕು ಎಂದು ನಿರ್ಧಾರ ಮಾಡಲು ಸಮಯ ಬೇಕಾಗಿದೆ. ಅರ್ಜಿ ನೋಂದಣಿ ಮಾಡಿಕೊಳ್ಳಲು ಸಮಯ ಬೇಕು. ಆದ್ದರಿಂದ ಆಗಸ್ಟ್ 16 ರಿಂದ ಕುಟುಂಬದ ಯಜಮಾನಿಗೆ 2 ಸಾವಿರ ರೂ. ನಂತೆ ಹಣ ಕೊಡುತ್ತೇವೆ ಎಂದರು.

Related News

spot_img

Revenue Alerts

spot_img

News

spot_img