ಬೆಂಗಳೂರು,ಜು15;ಇಂದು ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದ್ದು ಜುಲೈ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಹಾಗ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ.ಮಹಿಳೆಯರು ಮನೆಯಲ್ಲೇ ಕುಳಿತು ನೋಂದಾಯಿಸಿಕೊಳ್ಳಲು ಅನುಕೂಲ ಆಗುವ ನಿಟ್ಟಿನಲ್ಲಿ ಆಪ್ ಕೂಡ ಅಭಿವೃದ್ಧಿ ಪಡಿಸಲಾಗಿದೆ ಎಂದಿದ್ದರು. ಗೃಹ ಲಕ್ಷ್ಮಿ ಯೋಜನೆಗೆ 1902 ಸಹಾಯವಾಣಿ. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇರಲ್ಲ.ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲು ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಜಾಪ್ರತಿನಿಧಿಗಳ ನೇಮಕಕ್ಕೆ ನಿರ್ಧರಿಸಿದು, ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳಿಗೆ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡು,ಪ್ರತಿ ಒಂದು ಸಾವಿರ ಜನರಿಗೆ ಅಥವಾ ಸಾವಿರ ಜನರ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳು, ಒಬ್ಬರು ಮಹಿಳಾ ಪ್ರಜಾಪ್ರತಿನಿಧಿಗಳ ಆಯ್ಕೆ ಕಡ್ಡಾಯ ಮಾಡಬೇಕೆಂದು ನಿರ್ಧರಿಸಿದ್ದು,
ಒಂದು ತಿಂಗಳ ಮಟ್ಟಿಗೆ ಪ್ರಜಾಪ್ರತಿನಿಧಿಗಳ ನೇಮಕ ಮಾಡಲು ನಿರ್ಧರಿಸಿದೆ.