ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ ದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳೆ ಯಾವುದೇ ನ್ಯೂನತೆಗಳಾಗದಂತೆ ಸರಿಯಾದ ಮಾದರಿಯಲ್ಲಿ ಪರಿಷ್ಕರಣೆ ಕಾರ್ಯವಾಗಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇದೇ ವೇಳೆ ಪರಿಷ್ಕಣೆಯ ವೇಳಾಪಟ್ಟಿ ಹೊರಡಿಸಿದ್ದು, ಅದರ ಪ್ರಕಾರ, ಜುಲೈ 21ರಿಂದ ಒಂದು ತಿಂಗಳ ಕಾಲ (ಆಗಸ್ಟ್ 21ರವರೆಗೆ) ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕಣೆ ಮಾಡಬೇಕು ಎಂದು ಸೂಚಿಸಿದರು.
ಮತಗಟ್ಟೆ ಮಟ್ಟದ ಅಧಿಕಾರಿಗಳು(BLOs) ಮನೆ ಮನೆಗೆ ಭೇಟಿ ನೀಡಿ ಬಿಎಲ್‌ಒ ತಂತ್ರಾಂಶದ ಮೂಲಕ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸ ಮಾಡಲಿದ್ದಾರೆ. ಈ ವೇಳೆ ಬೂತ್ ಮಟ್ಟದ ಏಜೆಂಟ್ ಗಳಲ್ಲಿ ಸ್ಥಳದಲ್ಲಿರಬೇಕಿದೆ. ಎಲ್ಲಾ ಕಡೆ ಬೂತ್ ಮಟ್ಟದ ಏಜೆಂಟ್ ಗಳನ್ನು ನಿಯೋಜನೆ ಮಾಡಲು ರಾಜಕೀಯ ಪಕ್ಷದ ಅಧಿಕಾರಿಗಳಿಗೂ ಹೇಳಿದರು.ಮತದಾರರ ಪಟ್ಟಿ ಪರಿಷ್ಕರಣೆ -2024ರಲ್ಲಿ
ಬೂತ್‌ಗಳಲ್ಲಿ ಅಧಿಕಾರಿ ನಿಯೋಜಿಸಿ,ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಎಲ್ಲೆಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಕಡಿಮೆಯಿದ್ದಾರೆ ಅಲ್ಲಿ ಕೂಡಲೇ ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.