ಬೆಂಗಳೂರು ಆ 7:ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಎಂಬ ಮಾಹಿತಿ ಸಿಕ್ಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ನಡೆಯುವ ಸಭೆಯಲ್ಲಿ ತುಮಕೂರು, ಯಾದಗಿರಿ ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.ಸಭೆಯು ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2. 00 ರ ವರೆಗೆ ಹಾಗೂ ಸಂಜೆ 4.00 ಗಂಟೆಯಿಂದ 7 ಗಂಟೆಯವರೆಗೆ ನಡೆಯಲಿದೆ ಎಂದು ಸಿಎಂ ಕಚೇರಿ ಮಾಹಿತಿ ಬಿಡುಗಡೆ ಮಾಡಿದೆ.ಕಾಂಗ್ರೆಸ್ ಶಾಸಕರ ಅಹವಾಲು ಕೇಳಲು ,ಶಾಸಕರ ಬೇಡಿಕೆ, ಅನುದಾನ, ಅಭಿವೃದ್ಧಿ ಕಾಮಗಾರಿ, ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.