#banglore #Indipendenceday #Grhalakshmi #siddramayya
ಬೆಂಗಳೂರು, ಆ. 15:77ನೇ ಸ್ವಾತಂತ್ರ್ಯ ದಿನದ ನಿಮಿತ್ತ ಬೆಂಗಳೂರಿನ ಮಾಣಿಕ್ ಪಾ `ಪರೇಡ್ ಮೈದಾನದಲ್ಲಿ ಸಿಎಂ ಅವರು ಧ್ವಜಾರೋಹಣ ನೆರವೇರಿಸಿದರು ನಂತರ ಮಾತನಾಡಿದ ಅವರು,627ರಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ಸಾವಿರ ಹಣ ಹಾಕುತ್ತೇವೆ ಎಂದರು ಸರ್ಕಾರಿ ಮಕ್ಕಳಿಗೆ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲು ನೀರ್ಧರಿಸಿದ್ದೇವೆ ಬಡ ಡಯಾಲಿಸಿಸ್ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ನಗರ ಪ್ರದೇಶದ ಬಡವರು, ಶ್ರಮಿಕರಿಗಾಗಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ ಎಂದರು.ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆʼʼ ಎಂದು ತಿಳಿಸಿದರು. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಸರ್ಕಾರವು ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ.