#Lokayukta #Deputy Tahsildar #trap #accepting bribe
ಶಿವಮೊಗ್ಗ;ಲಂಚ ಪಡೆಯುತ್ತಿದ್ದಾಗಲೇ ಉಪ ತಹಶೀಲ್ದಾರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ನಡೆದಿದೆ.ಈ ನಡುವೆ ಶಿವಮೊಗ್ಗ ಜಿಲ್ಲೆಯ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಉಪ ತಹಸೀಲ್ದಾರ್ ಪರಮೇಶ್ವರಪ್ಪ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಾಡ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪರಮೇಶ್ವರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ.ಉಪ ತಹಶೀಲ್ದಾರ್ ಪರಮೇಶ್ವರಪ್ಪ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 30 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ