24.7 C
Bengaluru
Friday, April 25, 2025

ಲೋಕಾಯುಕ್ತ ಅಧಿಕಾರಿ ಎಂದು ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಳಗಾವಿ: ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಸಂತೋಷ್ ಕೊಪ್ಪದ್ ಬಂಧಿತ ಆರೋಪಿ.ಈತನ ಸಹಚರ ಬೈಲಹೊಂಗಲದ ದೇಶನೂರು ನಿವಾಸಿ ವಿಶಾಲ್ ಪಾಟೀಲ್ ಪರಾರಿಯಾಗಿದ್ದಾನೆ.ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಆರೋಪಿಗಳು ತಮ್ಮನ್ನು ಲೋಕಾಯುಕ್ತ ಅಧಿಕಾರಿಗಳು ಎಂದು ಹೇಳಿಕೊಂಡು ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದರು. ದೂರಿನ ಬಳಿಕ ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ ಪೊಲೀಸರು, ಪಿಡಬ್ಲ್ಯುಡಿ ಅಧಿಕಾರಿಗಳು ಎಂಬ ನೆಪದಲ್ಲಿ ಆರೋಪಿಗಳಿಗೆ ದೂರವಾಣಿ ಕರೆ ಮಾಡಿ ಲಂಚ ನೀಡಲು ಸಿದ್ಧರಿರುವುದಾಗಿ ಈ ವೇಳೆ ಆರೋಪಿಗಳು ಲಂಚ ಪಡೆಯಲು ಬಂದಾಗ ಸಂತೋಷ್ ಕೊಪ್ಪದ್ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಮತ್ತೋರ್ವ ಆರೋಪಿ ಎಸ್ಕೇಪ್ ಆಗಿದ್ದಾನೆ.
ತಿಳಿಸಿದ್ದಾರೆ.

Related News

spot_img

Revenue Alerts

spot_img

News

spot_img