#Demands #auto and cab #drivers #met #Siddaramaiah
ಬೆಂಗಳೂರು; ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ತಂದಿದ್ದೇವೆ. ಅದರಿಂದ ಖಾಸಗಿ ಬಸ್ ನವರಿಗೆ ನಷ್ಟ ಆಗಿದೆ ಎನ್ನುತ್ತಿದ್ದಾರೆ. ಖಾಸಗಿ ಸಾರಿಗೆಯವರು ನಷ್ಟ ತುಂಬಿಕೊಡಿ ಎಂಬ ಬೇಡಿಕೆ ಇಟ್ಟಿದ್ದಾರೆ. ಸಾರಿಗೆಯವರ ಈ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಕ್ತಿ ಯೋಜನೆಯಿಂದಾದ ನಷ್ಟಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.ಕಾನೂನಾತ್ಮಕವಾಗಿ ಅವರ ಬೇಡಿಕೆ ಏನು ಈಡೇರಿಸಲು ಸಾಧ್ಯ ಈಡೇರಿಸುತ್ತೇವೆ ಸರ್ಕಾರ ಚಾಲಕರ ಪರವಾಗಿ ಇದೇ ಅಂತ ಅವರು ಇದೇ ವೇಳೆ ತಿಳಿಸಿದರು.ಖಾಸಗಿ ಸಾರಿಗೆಯವರು ವಾಸ್ತವಕ್ಕೆ ದೂರವಾದ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ. ಖಾಸಗಿ ಬಸ್ ನವರು ಶಕ್ತಿ ಯೋಜನೆಯಿಂದ ನಮಗೆ ನಷ್ಟ ಆಗುತ್ತಿದೆ, ಹಣ ಕೊಡಿ ಅಂತ ಕೇಳುತ್ತಿದ್ದಾರೆ, ಅದೆಲ್ಲ ಸಾಧ್ಯವೇ? ಬಂದ್ ಹತ್ತಿಕ್ಕಲು ಅವಕಾಶ ಇಲ್ಲ. ಕಾನೂನಿಗೆ ತೊಂದರೆ ಆಗದ ರೀತಿಯಲ್ಲಿ ಬಂದ್ ಮಾಡಲಿ. ಬೇಡಿಕೆಗಳ ಬಗ್ಗೆ ಸಚಿವ ರಾಮಲಿಂಗರೆಡ್ಡಿ ಗಮನ ಹರಿಸುತ್ತಾರೆ ಎಂದರು.ಖಾಸಗಿ ವಾಹನದವರು ಬಂದ್, ಹೋರಾಟ ಮಾಡುವ ಅಗತ್ಯವಿಲ್ಲ. ಖಾಸಗಿ ಬಸ್ ಚಾಲಕರಿಗೆ ಸ್ವಲ್ಪ ಸಮಸ್ಯೆ ಆಗಿದೆ. ಆಟೋ, ಉಬರ್ ವಾಹನದವರ ಮುಷ್ಕರ ರಾಜಕೀಯ ಪ್ರೇರಿತ. ಪ್ರಯಾಣಿಕರಿಗೆ ತೊಂದರೆ ಕೊಡುವುದು ಒಳ್ಳೆಯದಲ್ಲ. ಬೇರೆ ಏನಾದರೂ ಸಮಸ್ಯೆ ಇದ್ದರೆ ಸರಿಪಡಿಸುವ ಕೆಲಸ ಮಾಡುತ್ತೇವೆ. ಪ್ರಯಾಣಿಕರಿಗೆ ತೊಂದರೆ ಮಾಡೋದು ಸರಿಯಲ್ಲ ಅಂದುಕೊಂಡಿದ್ದೇನೆ. ನಾವು ಯಾವ ರೀತಿ ನಿರ್ಧಾರ ಕೈಗೊಳ್ಳಬಹುದು ಎಂಬ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.