20.3 C
Bengaluru
Friday, December 27, 2024

ರಾಜ್ಯದ 161 ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವೆಂದು ಘೋಷಣೆ

#161 taluks #state #declared #eligible #drought #declaration
ಬೆಂಗಳೂರು: ರಾಜ್ಯದ 195 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ ನಡೆಸಲಾಗಿದ್ದು, ಕೇಂದ್ರದ ಮಾರ್ಗಸೂಚಿಯಂತೆ 161 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ. ಇದಲ್ಲದೆ, 34 ತಾಲೂಕುಗಳಲ್ಲೂ ಸ್ಥಿತಿ ಚಿಂತಾಜನಕವಾಗಿದ್ದು ಕೇಂದ್ರ ಮಾರ್ಗಸೂಚಿ ಅನ್ವಯಿಸದಿದ್ದರೂ ಈ ತಾಲೂಕುಗಳನ್ನೂ ಸಹ ಪಟ್ಟಿಗೆ ಸೇರಿಸಲಾಗಿದೆ. ಐದನೇ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ ಬರ ಘೋಷಣೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ. ಅಲ್ಲದೆ ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ತೀವ್ರ ಬರಪೀಡಿತ 161 ತಾಲ್ಲೂಕುಗಳ ಪಟ್ಟಿ: ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಪೂರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಹಾರೋಹಳ್ಳಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲಕೆರೆ, ಹೊಸದುರ್ಗ, ಮೊಳಕಾಲ್ಮೂರು, ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ, ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾಪಟ್ಟಣ, ಟಿ. ನರಸೀಪುರ, ಸರಗೂರು, ಸಾಲಿಗ್ರಾಮ, ಮಂಡ್ಯ ಜಿಲ್ಲೆಯ ಕೆಆರ್ ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡವಪುರ, ಶ್ರೀರಂಗಪಟ್ಟಣ, ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಸಂಡೂರು, ಶಿರುಗುಪ್ಪ, ಕುರುಗೋಡು, ಕಂಪ್ಲಿ, ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕರಟಗಿ, ಕುಕನೂರು, ಕನಕಗಿರಿ, ರಾಯಚೂರು ಜಿಲ್ಲೆಯ ಲಿಂಗಸುಗೂರು, ಮಾನ್ವಿ, ರಾಯಚೂರು ಶಿರವಾರ.

Related News

spot_img

Revenue Alerts

spot_img

News

spot_img