24.6 C
Bengaluru
Wednesday, December 18, 2024

ಖಾಸಗಿ ಜಮೀನಿನ ‘ಬಂಡಿದಾರಿ’ಕಾಲುದಾರಿ’ಗಳ ಒತ್ತುವರಿ ತೆರವುಗೊಳಿಸಿ ತಹಶೀಲ್ದಾರ್ ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ

ಬೆಂಗಳೂರು;ರೈತರು ವ್ಯವಸಾಯದ ಉದ್ದೇಶಕ್ಕಾಗಿ ಓಡಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿ ಖಾಸಗಿ ಜಮೀನಿನ ಮಾಲೀಕರು ಮುಚ್ವಿದ್ದರೆ, ಅಂತಹ ದಾರಿಗಳನ್ನು ತೆರವುಗೊಳಿಸಿ ಸುಗಮ ಓಡಾಟಕ್ಕೆ ಅವಕಾಶ ಕಲ್ಪಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ವೇಳೆ ದಾರಿ ನಕಾಶೆಯಲ್ಲಿ ಇದ್ದು ಒತ್ತುವರಿಯಾಗಿದ್ರೆ, ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸಲು ಸರ್ಕಾರ ಸುತ್ತೋಲೆ ಮೂಲಕ ಸೂಚನೆ ನೀಡಿದೆ.ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಮ್ಮ.ಸಿ ಅವರು ಸುತ್ತೋಲೆಯನ್ನು ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳಿಗೆ, ಕಂದಾಯ ಆಯುಕ್ತರಿಗೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿ ಸಮಸ್ಯೆ ಇದ್ದು, ಬಳಕೆದಾರರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಅಂತ ಹೇಳಿದ್ದಾರೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ಯಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಆಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

ಈ ಎಲ್ಲಾ ಕಾರಣಗಳಿಂದ ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 59ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತೆಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭಗಳ ದಾಖಲೆ ರಿಜಿಸ್ಟರ್ ನಲ್ಲಿ ನಮೂದು ಮಾಡಲು ಅವಕಾಶವಿರುತ್ತದೆ ಅಂತ ತಿಳಿಸಿದ್ದಾರೆ.ತಾಲ್ಲೂಕಿನ ತಹಶೀಲ್ದಾರರು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.

 

Related News

spot_img

Revenue Alerts

spot_img

News

spot_img