#New app #Launched #prevent fake #Labourcard #santhoshlad
ಬೆಂಗಳೂರು :ರಾಜ್ಯದಲ್ಲಿ ಸಹಸ್ರಾರು ಜನ ನಕಲಿ ಕಾರ್ಮಿಕ ಕಾರ್ಡ್(Labour card) ಪಡೆದು ಬಡ ಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹ ಅನರ್ಹರು (ineligible)ಪಡೆದಿರುವ ಗುರುತಿನ ಚೀಟಿ(Identity card) ನೋಂದಣಿಯನ್ನು ರದ್ದುಪಡಿಸುವುದು ಮಾತ್ರವಲ್ಲ, ಅಂಥಹವರ ವಿರುದ್ಧ ಕಾನೂನಿನ್ವಯ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.ಸುಳ್ಳು ದಾಖಲೆಗಳನ್ನು ನೀಡಿ ಕಾರ್ಮಿಕರ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ನಕಲಿ ಕಾರ್ಮಿಕ ಕಾರ್ಡ್ ತಡೆಯಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟು 45 ಲಕ್ಷ ಕಾರ್ಮಿಕರು ಕಾರ್ಮಿಕ ಕಾರ್ಡುಗಳನ್ನು ಹೊಂದಿದ್ದಾರೆ,ಒಂದೇ ವರ್ಷ 39 ಹೊಸ ಕಾರ್ಡುಗಳನ್ನು ನೀಡಲಾಗಿದೆ,ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Labor Welfare Board)ಕಾರ್ಮಿಕ ಕಾರ್ಡ್‌ಗಳನ್ನು ಕಟ್ಟಡ ಕಾರ್ಮಿಕರು ಮತ್ತು ಸಂಬಂಧಿತ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ನೀಡಲಾಗುತ್ತದೆ. ವಸತಿ, ವಾಣಿಜ್ಯ ಮತ್ತು ಸರ್ಕಾರಿ ಸೇರಿದಂತೆ ಎಲ್ಲಾ ನಿರ್ಮಾಣ ಯೋಜನೆಗಳಿಗೆ ಶೇ 1 ರಷ್ಟು ಸೆಸ್ ವಿಧಿಸಲಾಗುತ್ತದೆ. ಇದರಿಂದ ಪ್ರತಿ ವರ್ಷ 800 ರಿಂದ 1,000 ಕೋಟಿ ರೂ.ವರೆಗೆ ಸಂಗ್ರಹವಾಗುತ್ತದೆ. ಈ ಹಣವನ್ನು ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮಾತ್ರ ಬಳಸಲಾಗುತ್ತದೆ,ನಕಲಿ ಕಾರ್ಡ್ ತಡೆಗಾಗಿ ಹೊಸ ಆಯಪ್(Newapp) ಬಿಡುಗಡೆ ಮಾಡಲಾಗುತ್ತಿದೆ ರಾಜ್ಯದಲ್ಲಿ ಶೇ. 60ರಿಂದ 70 ರಷ್ಟು ಕಾರ್ಡ್ ಗಳು ನಕಲಿ (fake)ಕಾರ್ಡುಗಳಾಗಿವೆ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ,ಬೋಗಸ್ ಕಾರ್ಡ್ ಹೊಂದಿರುವವರು ನಿಜವಾದ ಕಾರ್ಮಿಕರಿಗೆ ಸಿಗಬೇಕಿರುವ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದ್ದಾರೆ,ಕಾರ್ಮಿಕರಲ್ಲದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಲ್ಲುತ್ತಿದ್ದ ಸೌಲಭ್ಯಗಳನ್ನು ರದ್ದು ಮಾಡಲು ಮುಂದಾಗಿದೆ