26.4 C
Bengaluru
Thursday, December 19, 2024

ಕರ್ನಾಟಕ BJP ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ

#B.Y.Vijayendra #elected # Karnataka #BJP #state president

ಬೆಂಗಳೂರು;ಕರ್ನಾಟಕ ಬಿಜೆಪಿಯ(BJP) ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ, ಮಾಜಿ ಸಿಎಂ ಯಡಿಯೂರಪ್ಪ ಪುತ್ರ, ಬಿ.ವೈ. ವಿಜಯೇಂದ್ರ(B,Y,Vijendra) ಅವರನ್ನು ನೇಮಕ ಮಾಡಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಾಂದ್ಲಾಜೆ, ವಿ.ಸೋಮಣ್ಣ, ಸಿ.ಟಿ ರವಿ, ಆರ್.ಅಶೋಕ್ ಮುಂತಾದವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ ವಿಜಯೇಂದ್ರ ಅವರ ನೇಮಕವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಲೋಕಸಭಾ ಚುನಾವಣೆಗೆ ಕೇವಲ 7 ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವರಿಷ್ಠರು ಕಳೆದ ಆರು ತಿಂಗಳಿನಿಂದ ರಾಜ್ಯ ಬಿಜೆಪಿ ಘಟಕದ ಮೇಲೆ ಹೊಂದಿದ್ದ ಮುನಿಸಿಗೆ ಕೊನೆ ಹಾಡಿದ್ದು, ಪ್ರಬಲ ಲಿಂಗಾಯತ ಸಮುದಾಯದ ಮತಗಳ ಮೇಲೆ ಭರವಸೆ ಇಟ್ಟುಕೊಂಡು ಈ ನೇಮಕ ಮಾಡಿರುವುದು ಮೇಲ್ನೋಟಕ್ಕ ತೋರುತ್ತಿದೆ. ಸಿಎಂ ಆಗಿದ್ದ ಅವಧಿಯಲ್ಲಿ 2020ರಿಂದ ಕೆಲವು ಉಪ ಚುನಾವಣೆಗಳಲ್ಲಿ ತಂದೆಯ ಪರವಾಗಿ ಕೆಲಸ ಮಾಡಿ, ಪಕ್ಷದ ಅಭ್ಯರ್ಥಿಗಳ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರು. 2018ರ ವಿಧಾನಸಭೆ(Assembly) ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದರೂ ಟಿಕೆಟ್ ಸಿಕ್ಕಿರಲಿಲ್ಲ. ಆದರೆ 2023ರಲ್ಲಿ ಯಡಿಯೂರಪ್ಪ ಅವರು ಚುನಾವಣಾ ರಾಜಕಾರಣದಿಂದ ದೂರ ಸರಿಯುವಂತೆ ವರಿಷ್ಠರು ಸೂಚಿಸಿದ್ದರಿಂದ ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಕಣಕ್ಕಿಳಿದು ಜಯಶಾಲಿಯಾಗಿದ್ದರು.

Related News

spot_img

Revenue Alerts

spot_img

News

spot_img