ಬೆಂಗಳೂರು;ಆನ್‌ಲೈನ್ ಮೂಲಕವೇ ಬೆಳೆ ಸಮೀಕ್ಷೆ(Crop Survey) ನಡೆಯಲಿದ್ದು ಅದರ ಆಧಾರದಲ್ಲಿಯೇ ರೈತರಿಗೆ ಪರಿಹಾರ ತಲುಪಲಿದೆ. ಹೀಗಾಗಿ ಬಿಟ್ಟು ಹೋಗಿರುವ ರೈತರ ಮಾಹಿತಿಯನ್ನು ವಾರದೊಳಗೆ ‘ಫ್ರೂಟ್ಸ್’ ತಂತ್ರಾಂಶದಲ್ಲಿ ನಮೂದಿಸಲು ಕಂದಾಯ ಸಚಿವ್ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯಾವುದೇ ಬೆಳೆ ಸಮೀಕ್ಷೆಯ ವರದಿಯನ್ನು ಮ್ಯಾನ್ಯುವಲ್(manuval) ಆಗಿ ಸ್ವೀಕರಿಸಲು ಸಾಧ್ಯವಾಗಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಈ ವಿಚಾರವನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಫ್ರೂಟ್ಸ್(FRUITS) ತಂತ್ರಾಂಶದಲ್ಲಿ ಸೇರಿಸಲು ಪಹಣಿ ಪತ್ರ ಮತ್ತು ಆಧಾರ್ ಸಂಖ್ಯೆ ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾದ ಬ್ಯಾಂಕ್ ಖಾತೆ(Bank account) ಮಾಹಿತಿ ನೀಡಬೇಕು.ರೈತರು(Farmer) ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2023 ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ (Mobileapp)ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ.ಒಂದು ವೇಳೆ, ರೈತರು ತಮ್ಮ ಸ್ನೇಹಿತರು ಅಥವಾ ಸಂಬಂಧಿಕರಿಗೆ ಸಹಾಯ ಮಾಡುವುದಾದರೆ ಅವರ ಸರ್ವೆ ನಂಬರ್‍ಗಳನ್ನು ಸಹ ತಮ್ಮ ಮೊಬೈಲ್ ಆಪ್‍ನಲ್ಲಿ ಸೇರಿಸಿಕೊಂಡು ಅವರ ಜಮೀನಿನ ವಿವರ ದಾಖಲಿಸಲೂ ಸಹ ಮೊಬೈಲ್ ಆಪ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ.