#HD Kumarswamy, #Siddaramaiah, #Dr Yatindra, #Viral Audio case
ಬೆಂಗಳೂರು, ನ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವೈರಲ್ ಅಡಿಯೋ ವಿವಾದ ರಾಜಕೀಯ ಕೆಸರೆರಚಾಟಕ್ಕೆ ನಾಂದಿ ಹಾಡಿದೆ.ಕುಟುಂಬ ರಾಜಕಾರಣದ ಬಗ್ಗೆ ಪ್ರಸ್ತಾಪ ಮಾಡಿ ಟಾಂಗ್ ಕೊಟ್ಟಿದ್ದ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಸರ್ಕಾರದ ವರ್ಗಾವಣೆ ದಂಧೆಯ ಬಗ್ಗೆ ಪ್ರಸ್ತಾಪಿಸಿರುವ ಎಚ್‌ಡಿಕೆ, ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದು ಕುಮಾಸ್ವಾಮಿ ಅವರು ಟಾಂಗ್ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಡುವಿನ ಫೋನ್ ಸಂಭಾಷಣೆಯಲ್ಲಿ ಪ್ರಸ್ತಾಪಗೊಂಡಿದ್ದ ವಿವೇಕಾನಂದ ಎನ್ನುವ ಹೆಸರು ಕಳೆದ ರಾತ್ರಿ ಹೊರಬಿದ್ದ ಪೊಲೀಸ್ ಇನಸ್ಪೆಕ್ಟರ್ʼಗಳ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟೀಕಾಪ್ರಹಾರ ನಡೆಸಿರುವ ಅವರು; ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.ಬಾಯಿ ತೆರೆದರೆ ಭಗವದ್ಗೀತೆ. ನಾಲಿಗೆ ಮೇಲೆ ನೈತಿಕತೆಯ ನಾಟ್ಯ. ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ & ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ನೇರವಾಗಿ ತಿರುಗೇಟು ನೀಡಿದ್ದಾರೆ.