20.2 C
Bengaluru
Thursday, December 19, 2024

ಕರ್ನಾಟಕ ಪೊಲೀಸ್ ಪರೀಕ್ಷೆ: ಎಸ್ಎಂಎಸ್ ಮೂಲಕ ಅಭ್ಯರ್ಥಿಗಳಿಗೆ ಮಾಹಿತಿ

ಬೆಂಗಳೂರು ನ27;ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್ – 454 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 10.12.2023 ರಂದು ಬೆಳಗ್ಗೆ 11.00 ರಿಂದ 12.30 ಗಂಟೆಯವರೆಗೆ ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆ, ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಯಾದಗಿರಿ ಜಿಲ್ಲೆ, ರಾಯಚೂರು ಜಿಲ್ಲೆ, ಕೊಪ್ಪಳ ಜಿಲ್ಲೆ, ಬಳ್ಳಾರಿ ಜಿಲ್ಲೆ ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಆದ್ದರಿಂದ, ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ.

Related News

spot_img

Revenue Alerts

spot_img

News

spot_img