#Addition # voter #list #Registration #campaign # today
ಬೆಂಗಳೂರು:ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ(electoral roll) ಸೇರ್ಪಡೆಯಾಗುವ ನಿಟ್ಟಿನಲ್ಲಿ ಡಿ.2, 3ರಂದು ಎರಡು ದಿನಗಳ ಕಾಲ ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನವನ್ನು(Special Registration Campaign) ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 27.10.2023 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 27.10.2023 ರಿಂದ 09.12.2023 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.ಜಿಲ್ಲಾ ಚುನಾವಣಾಧಿಕಾರಿಗಳು- ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅ.27ರಂದು ಕರಡು ಮತದಾರರ ಪ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಹಕ್ಕು ಮತ್ತು ಸೆಹ ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೆ ಅವಕಾಶ ನೀಡಲಾಗಿದೆ.ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲಾ ಕಂದಾಯ ಅಧಿಕಾರಿಗಳು / ಸಹ ಕಂದಾಯ ಅಧಿಕಾರಿಗಳು / ವಾರ್ಡ್ ಕಛೇರಿಗಳು / ಮತಗಟ್ಟೆಗಳಲ್ಲಿ ಆಯೋಜಿಸಲಾಗಿರುತ್ತದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಿದ್ದಾರೆ.ಮತದಾರರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆ ದುಕೊಳ್ಳಬಹುದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತು ಪಟ್ಟಿಯಲ್ಲಿ ಹೊಸದಾಗಿ ಮತದಾರರ ಹೆಸರು ಸೇರ್ಪಡೆಗೊಳಿಸಲು, ನಮೂನೆ-7: ಮತದಾರರ ಪಟ್ಟಿ ಕುರಿತ ಆಕ್ಷೇಪಣೆ ಹಾಗೂ ನಮೂನೆ-8: ಮತದಾರರ ಚೀಟಿಯಲ್ಲಿನ ಬದಲಾವಣೆಗಾಗಿ) ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಅಥವಾ ಆನ್‌ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ Web Portal:- voters.eci.gov.in CxÀ Á Voter Helpline Mobile App ನೋಂದಾಯಿಸಿಕೊಳ್ಳಬಹುದಾಗಿದೆ.ವಿಶೇಷ ನೋಂದಣಿ ಅಭಿಯಾನದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹೊಸ ಮತದಾರರ ನೋಂದಣಿ ಮಾಡಿಕೊಳ್ಳುತ್ತಾರೆ. ಜತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ(Bangalore District Election Officer) ತುಷಾರ್ ಗಿರಿನಾಥ್ ತಿಳಿಸಿದ್ದಾರೆ.