19.9 C
Bengaluru
Friday, November 22, 2024

Lokayukta Raid: ರಾಜ್ಯದ 63 ಕಡೆ ಮೆಗಾ ದಾಳಿ;ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್!

#Lokayukta Raid #Mega raid # 63 parts # state #’Loka’ shock # corrupt officials

ಬೆಂಗಳೂರು;ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ರಾಜ್ಯದ 63 ಸ್ಥಳಗಳಲ್ಲಿ 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟರಿಗೆ ಶಾಕ್ ಕೊಟ್ಟಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರು 3 ಕಡೆ ಲೋಕಾಯುಕ್ತ ದಾಳಿ

ಬೆಸ್ಕಾಂ ವಿಜಿಲೆನ್ಸ್ ಸ್ಕ್ವಾಡ್ ಅಧಿಕಾರಿ T.N.ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೂ ದಾಳಿ ನಡೆಸಿದ್ದಾರೆ.

ಬಳ್ಳಾರಿ, ವಿಜಯನಗರ, ಲೋಕಾಯುಕ್ತ ದಾಳಿ

ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿಯಾಗಿದೆ. ಬಳ್ಳಾರಿಯ(Ballary) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ(Department of Mines and Earth Sciences) ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡಿದ್ದರು. ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ ಎಫ್ ಓ(DRFO) ಮಾರುತಿ ಗಂಗಾವತಿಯಲ್ಲಿ‌ ಕೆಲಸ ಮಾಡುತ್ತಿದ್ದರು. ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೀದರ್‌ನಲ್ಲೂಲೋಕಾಯುಕ್ತ ದಾಳಿ

ಬೀದರ್​​ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ

ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ

ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ. ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದಾರೆ. ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆದಿದೆ.

Related News

spot_img

Revenue Alerts

spot_img

News

spot_img