25.5 C
Bengaluru
Thursday, December 19, 2024

ಜೆಡಿಎಸ್ ನೂತನ ರಾಷ್ಟ್ರಾಧ್ಯಕ್ಷರಾಗಿ ಸಿಕೆ ನಾಣು ನೇಮಕ

ಬೆಂಗಳೂರು;HD ದೇವೇಗೌಡರಿಗೆ ಇಬ್ರಾಹಿಂ ಬಣ ಸೆಡ್ಡು ಹೊಡೆದಿದೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ JDS ನೂತನ ರಾಷ್ಟ್ರಾಧ್ಯಕ್ಷರನ್ನಾಗಿ CK ನಾಣು ಅವರನ್ನ ಆಯ್ಕೆ ಮಾಡುವ ಅಂಗೀಕಾರ ಕೈಗೊಳ್ಳಲಾಗಿದೆ. ತೆಲಂಗಾಣ, ಕೇರಳ ತಮಿಳುನಾಡು ಸೇರಿ ಇತರೆ ರಾಜ್ಯಗಳ ಪದಾಧಿಕಾರಿಗಳು ಭಾಗಿಯಾಗಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ, ಇದು ರಾಷ್ಟ್ರೀಯ ಕೌನ್ಸಿಲ್‌ನ ನಿರ್ಧಾರ, HDD ಜಾಗಕ್ಕೆ ನೂತನ ರಾಷ್ಟ್ರಾಧ್ಯಕ್ಷರನ್ನ ನೇಮಕ ಮಾಡಲಾಗಿದೆ. ನಾವು ಉಚ್ಚಾಟನೆ ಮಾಡಿಲ್ಲ, ತೆಗೆದಿದ್ದೇವೆ ಎಂದಿದ್ದಾರೆ.ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ ​ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ ಮಾಡಲಾಗಿದೆ. ಇದು ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್​ ಭೇಟಿಗೆ ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.ಬೆಂಗಳೂರಿನಲ್ಲಿ(Banglore) ನಡೆದ ಸಭೆಯಲ್ಲಿ JDS ನೂತನ ರಾಷ್ಟ್ರಾಧ್ಯಕ್ಷರನ್ನಾಗಿ CK ನಾಣು ಅವರನ್ನ ಆಯ್ಕೆ ಮಾಡುವ ಅಂಗೀಕಾರ ಕೈಗೊಳ್ಳಲಾಗಿದೆ. ತೆಲಂಗಾಣ, ಕೇರಳ ತಮಿಳುನಾಡು ಸೇರಿ ಇತರೆ ರಾಜ್ಯಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ. ಸಮಾವೇಶಕ್ಕೆ ಅಖಿಲೇಶ್, ನಿತೀಶ್, ರಾಹುಲ್​ ಗಾಂಧಿಗೆ ಆಹ್ವಾನ ನೀಡಲಾಗುವುದು. ಸತ್ತವರ ಫೋಟೋ ಹಾಕಿದ್ದಾರೆ ಎಂದು ದೇವೇಗೌಡರು ಹೇಳಿದ್ರು. ಜಯಪ್ರಕಾಶ್ ನಾರಾಯಣ್, ಗಾಂಧೀಜಿ‌, ರಾಮಕೃಷ್ಣ ಹೆಗಡೆ ಇವರು ಸತ್ತರೂ ಸಿದ್ದಾಂತದಿಂದ ಜೀವಂತವಾಗಿರುತ್ತಾರೆ. ಕೆಲವರು ಬದುಕಿದ್ದರೂ ಹೆಣ ಎನ್ನುವುದನ್ನು ಹೇಳಲು ಇಷ್ಟಪಡುತ್ತೇನೆ ಎಂದು ದೇವೇಗೌಡ ಅವರಿಗೆ ತಿರುಗೇಟು ನೀಡಿದರು.ಡಿಸೆಂಬರ್ 9ರಂದು :ಜೆಡಿಎಸ್ (JDS) ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ (CM Ibrahim) ಹಾಗೂ ಪಕ್ಷದ ಜೆಡಿಎಸ್​ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿಗುತ್ತು

Related News

spot_img

Revenue Alerts

spot_img

News

spot_img