ಬಾಗಲಕೋಟೆ : ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ(lokayukta) ಪೊಲೀಸರ ಬಲೆಗೆ ಬೀಳಗಿಯ ಸರ್ವೇಯರ್(Surveyor) ಬಿದ್ದ ಘಟನೆ ಸೋಮವಾರ(monday) ಸಂಜೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ನಡೆದಿದೆ.ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿ ಎಂದು ತಿಳಿದು ಬಂದಿದೆ. ಅಣ್ಣೇಶಿ ಲಮಾಣಿ ಎಂಬವರಿಂದ 15 ಸಾವಿರ ರೂ. ಲಂಚ(Bribe) ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.ಸುನಗ ಗ್ರಾಮದಲ್ಲಿದ್ದ 8 ಎಕರೆ ಜಮೀನಿಗೆ ಸಂಬಂಧಿಸಿದಂತೆ ಪಿ.ಟಿ.ಶೀಟ್ ಮಾಡಿಕೊಡಲು ಮಹಾಂತೇಶ ಕವಳಿಕಟ್ಟಿ ಮೊದಲು 28 ಸಾವಿರ ರೂ. ಶುಲ್ಕ(fees) ಎಂದು ಪಡೆದುಕೊಂಡಿದ್ದರೂ ಕೆಲಸ ಮಾಡಿ ಕೊಟ್ಟಿರಲಿಲ್ಲ. ಅಲ್ಲದೇ 38 ಸಾವಿರ ರೂ. ಹಣಕ್ಕೆ ಬೇಡಿಕೆಯಟ್ಟಿದ್ದನು ಎಂದು ತಿಳಿದು ಬಂದಿದೆ. 15 ಸಾವಿರ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮಹಾಂತೇಶ್ ಕವಳಿಕಟ್ಟಿಯನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಿದ್ದಾರೆ. ಲೋಕಾಯುಕ್ತ(Lokayukta) ಎಸ್ಪಿ ಹನುಮಂತರಾಯ ಮಾರ್ಗದರ್ಶನದಲ್ಲಿ ಡಿವೈಎಸ್ಪಿ(DYSP) ಪುಷ್ಪಲತಾ ನೇತೃತ್ವದಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ತನಿಖೆ ಕಾರ್ಯಾಚರಣೆ ಮುಂದುವರಿದಿದೆ.