25.8 C
Bengaluru
Friday, November 22, 2024

ಕಮರ್ಷಿಯಲ್ ಗ್ಯಾಸ್‌ ಸಿಲಿಂಡರ್‌ ಬೆಲೆ ಕೊಂಚ ಇಳಿಕೆ

ನವದೆಹಲಿ, ಜನವರಿ 1:ವಾಣಿಜ್ಯ ಬಳಕೆಯ(commercial cylinder) ಸಿಲಿಂಡರ್ ಬೆಲೆಯಲ್ಲಿ ಕೊಂಚ ಬದಲಾವಣೆಗಳಾಗಿವೆ. ಆದರೆ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಹೊಸ ವರ್ಷದ ಮೊದಲ ದಿನದಂದೇ ವಾಣಿಜ್ಯ ಬಳಕೆಯ ಸಿಲಿಂಡ‌ರ್ ಬೆಲೆ ಇಳಿಕೆಯಾಗಿರುವುದರಿಂದ ಹೊಟೇಲ್ ಉದ್ಯಮಿಗಳಿಗೆ ಶುಭಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಕೊಂಚ ಕಡಿಮೆಯಾಗಿದೆ. ಪ್ರಸ್ತುತ 19 ಕೆಜಿ ವಾಣಿಜ್ಯ ಸಿಲಿಂಡ‌ರ್ ಬೆಲೆ ದೇಶದ ವಿವಿಧ ಕಡೆ ಸರಾರಿ 1,924.50 ಇದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ (14.5 ಕೆಜಿ) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೆ 918.50 ರೂಪಾಯಿ ಆಗಿದೆ.ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದೆ. ಈ ಮೊದಲು ಈ ದರ 1,757 ರೂ. ಇತ್ತು. ಹೀಗಾಗಿ ದೆಹಲಿಯಲ್ಲಿ ಒಂದೂವರೆ ರೂಪಾಯಿಯಷ್ಟು ಬೆಲೆ ಇಳಿಕೆಯಾದಂತಾಗಿದೆ. ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದೆ ಮತ್ತು 19 ಕೆಜಿ ಸಿಲಿಂಡರ್ ಬೆಲೆ ಈಗ 1,924.50 ರೂ. ಆಗಿದೆ.ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1.50 ರೂಪಾಯಿ ಇಳಿದು 1,708.50 ರೂಪಾಯಿಗೆ ತಲುಪಿದೆ. ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಇಂದು 50 ಪೈಸೆ ಏರಿಕೆಯಾಗಿದ್ದು, 1,869 ರೂ.ಗೆ ಆಗಿದೆ.

Related News

spot_img

Revenue Alerts

spot_img

News

spot_img