Bangalore #Teachers #Constituency #By-election#AP Ranganath #Nomination Submission
ಬೆಂಗಳೂರು;ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ ಪಿ ರಂಗನಾಥ್ ಅವರು ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.. ಮಾಜ ಸಿಎಂ ಹೆಚ್‌ಡಿಕೆ(HDK) ನೇತೃತ್ವದಲ್ಲಿ ರಂಗನಾಥ್ ಅವರು ಬೆಂಗಳೂರು ಪ್ರಾದೇಶಿಕ ಆಯುಕ್ತರಿಗೆ ನಾಮಪತ್ರ(nomination paper) ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಉಪಸ್ಥಿತರಿದ್ದರು.ಅಲ್ಲದೆ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ನಂತದ ಇದು ಮೊದಲ ಚುನಾವಣೆಯಾಗಿದೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS Alliance) ಮಾಡಿಕೊಂಡಿದ್ದು, ರಾಜ್ಯದಲ್ಲಿ ಲೋಕ ಸಮರಕ್ಕೆ ಸಜ್ಜಾಗಿದೆ. ಈಗ ಇದಕ್ಕಿಂತ ಮುಂಚಿತವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (Bangalore Teachers Constituency) ಫೆ. 16ರಂದು ಉಪ ಚುನಾವಣೆ ನಡೆಯುತ್ತಲಿದೆ.