22.7 C
Bengaluru
Monday, December 23, 2024

ಚುನಾವಣಾ ಬಾಂಡ್‌ಗಳ ಸಂಖ್ಯೆ ಬಿಡುಗಡೆ ಮಾಡುವಂತೆ SBIಗೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನವೇ ನಡೆದ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗವು(Central Election Commission) ಗುರುವಾರ ಚುನಾವಣಾ ಬಾಂಡ್‌ ಗಳ ಮಾಹಿತಿಯನ್ನು ಬಹಿರಂಗಗೊಳಿಸಿದೆ.ಚುನಾವಣಾ ಬಾಂಡ್ ಪ್ರಕರಣದಲ್ಲಿ SBIಗೆ ಸುಪ್ರೀಂ ಕೋರ್ಟ್(Supremecourt) ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ. ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವಿನ ಸಂಪರ್ಕದ ಬಗ್ಗೆ ಮಾಹಿತಿ ಲಭ್ಯವಾಗುವಂತೆ ಚುನಾವಣಾ ಬಾಂಡ್‌ಗಳ ಸಂಖ್ಯೆಯನ್ನು ಬಿಡುಗಡೆ ಮಾಡಲು ನ್ಯಾಯಾಲಯವು SBIಗೆ ಕೇಳಿದೆ. ಇದಕ್ಕಾಗಿ ನ್ಯಾಯಾಲಯ ಸೋಮವಾರದವರೆಗೆ ಕಾಲಾವಕಾಶ ನೀಡಿದೆ. ಈ ಹಿಂದೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡುವಂತೆ ನ್ಯಾಯಾಲಯ SBIಗೆ ಸೂಚಿಸಿತ್ತು. ಈ ಹಿಂದೆ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಬಾಂಡ್‌ಗಳ ಸಂಖ್ಯೆಗಳು ಇರಲಿಲ್ಲಇದೀಗ 327 ಪುಟಗಳ ದಾನಿಗಳ ಪಟ್ಟಿ ಮತ್ತು 427 ಪುಟಗಳ ಪಕ್ಷಗಳ ಪಟ್ಟಿಯ ಎರಡು ಡೇಟಾ ಸೆಟ್‌ಗಳನ್ನು ಸಾರ್ವಜನಿಕವಾಗಿ ಬಹಿರಂಗ ಮಾಡಲಾಗಿದೆ. 2019ರ ಏಪ್ರಿಲ್ 12 ರಿಂದ 1 ಲಕ್ಷ ಮತ್ತು 1 ಕೋಟಿ ಮೌಲ್ಯದ ಮುಖಬೆಲೆಯ ಬಾಂಡ್‌ಗಳ ಖರೀದಿ, ಅವುಗಳನ್ನು ಖರೀದಿಸಿದ ಕಂಪನಿಗಳು ಮತ್ತು ವ್ಯಕ್ತಿಗಳು ಮತ್ತು ಹಣವನ್ನು ಪಡೆದ ರಾಜಕೀಯ ಪಕ್ಷಗಳ ಮಾಹಿತಿಯನ್ನು ಬಯಲು ಮಾಡಲಾಗಿದೆ.ಚುನಾವಣಾ ಬಾಂಡ್‌ ಗಳ ದಾನಿಗಳಲ್ಲಿ ಗ್ರಾಸಿಮ್ ಇಂಡಸ್ಟ್ರೀಸ್, ಮೇಘಾ ಇಂಜಿನಿಯರಿಂಗ್, ಪಿರಮಲ್ ಎಂಟರ್‌ಪ್ರೈಸಸ್, ಟೊರೆಂಟ್ ಪವರ್, ಭಾರ್ತಿ ಏರ್‌ಟೆಲ್, ಡಿಎಲ್‌ಎಫ್ ಕಮರ್ಷಿಯಲ್ ಡೆವಲಪರ್ಸ್, ವೇದಾಂತ ಲಿಮಿಟೆಡ್, ಅಪೊಲೊ ಟೈರ್ಸ್, ಲಕ್ಷ್ಮಿ ಮಿತ್ತಲ್, ಎಡೆಲ್‌ವೀಸ್, ಪಿವಿಆರ್, ಕೆವೆಂಟರ್, ಸುಲಾ ವೈನ್, ವೆಲ್ಸ್‌ಪುನ್, ವೆಲ್‌ಸ್‌ಪನ್, ಪರ್ಮಾ ಇತರರು ಸೇರಿದ್ದಾರೆ.

Related News

spot_img

Revenue Alerts

spot_img

News

spot_img