ಬೆಂಗಳೂರು: ಚುನಾವಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದೀಗ ಫೆಬ್ರವರಿ 17ಕ್ಕೆ ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.ವಿಧಾನಮಂಡಲದ ಬಜೆಟ್ ಅಧಿವೇಶನವನ್ನು ಫೆಬ್ರವರಿ 10ರಿಂದ ನಡೆಸಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹಾಗೂ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ್ ಬಜೆಟ್ ಮಂಡಿಸಲಿದ್ದಾರೆ.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಫೆಬ್ರವರಿ 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ16ರ ವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಬಜೆಟ್ ಮಂಡಿಸುವ ಸಾಧ್ಯತೆ ಇದೆ’ ಎಂದು ತಿಳಿಸಿದರು.ಅಧಿವೇಶನದ ಕೊನೆಯ ದಿನವನ್ನು ನಿರ್ಧರಿಸಿಲ್ಲ. ವಿಧಾನಮಂಡಲದ ಉಭಯ ಸದನಗಳ ಕಲಾಪ ಸಲಹಾ ಸಮಿತಿಗಳ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಲೋಕೋಪಯೋಗಿ ಇಲಾಖೆವತಿಯಿಂದ 100 ಅಂಬೇಡ್ಕರ್ ವಸತಿ ನಿಲಯ ನಿರ್ಮಾಣಕ್ಕೆ 600 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. ಬೆಂಗಳೂರು ನಗರದ ಕಲಾಸಿಪಾಳ್ಯದಲ್ಲಿ ನವೀನ ಬಸ್ ನಿಲ್ದಾಣ ನಿರ್ಮಾಣಕ್ಕೆ 63 ಕೋಟಿ ರೂ. ಅನುಮೋದನೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಲ್ಲಿ ಸ್ಪೂರ್ತಿ ಯೋಜನೆಗೆ 12.5 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನಾರಯಣ ಗುರು ಹೆಸರಲ್ಲಿ ಹಿಂದುಳಿದ ವರ್ಗಗಳ ಶಾಲಾ ನಿರ್ಮಾಣಕ್ಕೆ 72 ಕೋಟಿ ರೂ. ನೀಡಲಾಗಿದೆ ಎಂದು ಜೆ.ಸಿ ಮಾಧುಸ್ವಾಮಿ ತಿಳಿಸಿದರು.
ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ ರೂ. 54.60 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ.ಕರ್ನಾಟಕ ಸಕ್ಕರೆ (ಉತ್ಪಾದನಾ ನಿಯಂತ್ರಣ) ಆದೇಶ 2022ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಬಾರಿ ಯುವಕರು, ದುಡಿಯುವ ವರ್ಗ, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗಕಕ್ಕೆ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ.
ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು
*ರಾಜ್ಯದ 847 ಉಪಕೇಂದ್ರಗಳನ್ನು 71.56 ಕೋಟಿ ವೆಚ್ಚದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಅನುಷ್ಠಾನ.
*ರಾಜ್ಯದ 114 ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್ ಗಳನ್ನು 39.364 ಕೋಟಿ ವೆಚ್ಚದಲ್ಲಿ ಸ್ಥಾಪನೆ.
*ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ ರೂ. 54.60 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಒಪ್ಪಿಗೆ.
* ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆ 19 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಹಾಗೂ ವಸತಿ ಗೃಹಗಳ ನಿರ್ಮಾಣ.
*ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ 2.0 ಅನುಷ್ಠಾನ.
*ರಾಜ್ಯದ ವಿವಿಧೆಡೆ 640.01 ಕೋಟಿ ವೆಚ್ಚದಲ್ಲಿ, ಒಟ್ಟು 100 ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ಕಟ್ಟಡ ಸ್ಥಾಪನೆ
*ಕರ್ನಾಟಕ ಸಕ್ಕರೆ ಉತ್ಪಾದನಾ ಆದೇಶ 2022ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.