ಬೆಂಗಳೂರು;ಮೇಕೆದಾಟು ಹೋರಾಟಗಾರರ ಸಮಿತಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ದೆಹಲಿ ಚಲೋ ನಿರ್ಧಾರ ಕೈಗೊಂಡಿದೆ. ಹೋರಾಟಕ್ಕೆ ವಿವಿಧ ಕನ್ನಡಪರ ಸಂಘಟನೆಗಳಿಂದ ಬೆಂಬಲ ವ್ಯಕ್ತಪಡಿಸಿವೆ ಎಂದು ಸಮಿತಿ ಹೇಳಿಕೊಂಡಿದೆ.ರಾಮನಗರದಲ್ಲಿ ಮೇಕೆದಾಟು ಹೋರಾಟ ಸಮಿತಿ ಮುಖಂಡರು ಈ ಬಗ್ಗೆ ಮಾಹಿತಿ ನೀಡಿದ್ದು, ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಜನವರಿ 31ರಂದು ಬೆಂಗಳೂರಿನಿಂದ ದೆಹಲಿ ಚಲೋ ಆರಂಭಿಸುವುದಾಗಿ ತಿಳಿಸಿದ್ದಾರೆ.ಎಂದು ಮೇಕೆದಾಟು ಹೋರಾಟಗಾರರ ಸಮಿತಿ ರಾಮನಗರದಲ್ಲಿ ಹೇಳಿಕೆ ನೀಡಿದೆ.
ಮೇಕೆದಾಟು ಎಲ್ಲಿದೆ? ಯಾಕಾಗಿ ಈ ಹೆಸರು
ಬೆಂಗಳೂರು ನಗರಕ್ಕಿಂತ ಸುಮಾರು 90 ಕಿಲೋ ಮೀಟರ್ ದೂರದಲ್ಲಿರುವ ರಾಮನಗರದ ಜಿಲ್ಲೆಯ ಹನೂರು ಅರಣ್ಯ ವಲಯದ ಗುಡ್ಡೆಯ ನಡುವೆ ಒಂಟಿಗುಂಡು ಸ್ಥಳದಲ್ಲಿ ಹರಿಯುವ ಕಾವೇರಿ ನದಿ ಪ್ರದೇಶಕ್ಕೆ ಮೇಕೆ ದಾಟು ಎಂಬ ಹೆಸರು. ಕಾವೇರಿ ನದಿಯು ಅತ್ಯಂತ ರಭಸದಿಂದ ಹರಿದು ಬಂಡೆಗಳನ್ನು ಕೊರೆದು ವಿಚಿತ್ರ ಆಕೃತಿಗಳನ್ನು ಮೂಡಿಸಿದೆ. ಈ ಸ್ಥಳದಲ್ಲಿ ಆಹಾರ ತಿನ್ನಲು ಬರುವ ಮೇಕೆಗಳು ದಾಟುವ ಕಾರಣಕ್ಕಾಗಿ ಈ ಪ್ರದೇಶ ಹೆಸರು ಮೇಕೆದಾಟು ಎಂದು ಕರೆಯಲಾಗುತ್ತಿದೆ.
ಫೆಬ್ರವರಿ 1ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಯೋಜನೆಗಾಗಿ ಧರಣಿ ನಡೆಸಲಾಗುವುದು. ಧರಣಿ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಮನವಿ ಮಾಡಲಾಗುವುದು ಎಂದು ತಿಳಿಸಿದರು. ನಮ್ಮ ಹೋರಾಟಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಿವೆ ಎಂದು ಸಮಿತಿ ತಿಳಿಸಿದೆ.ಪರಿಶೀಲನೆಯ ನಂತರ ಮಾತನಾಡಿದ ಸಿಡಬ್ಲ್ಯುಎಂಎ ಅಧ್ಯಕ್ಷ ಸೌಮಿತ್ರ ಕುಮಾರ್ ಹಲ್ದಾರ್, ಕುಡಿಯುವ ನೀರಿನ ಉದ್ದೇಶಕ್ಕಾಗಿ ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಯೋಜಿಸಿದೆ, ಅದರ ನಂತರ ತಮಿಳುನಾಡು ಕರ್ನಾಟಕದ ಯೋಜನೆಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.