ಬೆಂಗಳೂರು;ರಾಜ್ಯ ವಿಧಾನ ಸೌಧದಲ್ಲಿ ಫೆ.10 ರಿಂದ 24ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು,ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ವೇಳೆ ಕಾರ್ಯಕಲಾಪಗಳಿಗೆ ಅಡಚಣೆಯಾಗದಂತೆ,ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರು ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕರ್ಫ್ಯೂ ಜಾರಿಮಾಡಿ ಆದೇಶಿಸಿದ್ದಾರೆ.
ಮೆರವಣಿಗೆ, ಪ್ರತಿಭಟನೆ ಹಾಗೂ ಮಾರಕಾಸ್ತ್ರಗಳು, ಕಲ್ಲು, ಇಟ್ಟಿಗೆ ದೈಹಿಕ ಹಿಂಸೆ,ಸ್ಫೋಟಕಗಳನ್ನು ಸಿಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದರ ಜೊತೆಗೆ ಯಾವುದೇ ಪ್ರತಿಕೃತಿಗಳನ್ನುಸುಡುವಂತಿಲ್ಲ,ಪ್ರಚೋದಿಸುವ ಘೋಷಣೆಗಳು ಮತ್ತು ಭಿತ್ತಿ ಪತ್ರಗಳ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ ,ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 5 ಕ್ಕಿಂತ ಹೆಚ್ಚು ಜನ ಒಂದೆಡೆ ಗುಂಪು ಸೇರುವಂತಿಲ್ಲ,ಎಂದು ಆದೇಶಿಸಲಾಗಿದೆ.ಅಧಿವೇಶನ ನಡೆಯುವ ಸಮಯದಲ್ಲಿ ಪ್ರತಿಭಟನೆ, ಮೆರವಣಿಗೆ, ಧರಣಿ, ಸತ್ಯಾಗ್ರಹ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮಗಳನ್ನೂ ಸಹ ಹೋರಾಟಗಾರರು ಹಮ್ಮಿಕೊಳ್ಳುವ ಸಾಧ್ಯತೆಗಳಿರುತ್ತವೆ , ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
2023ರ ವಿಧಾನಸಭಾ ಚುನಾವಣೆ ಸಮಯದಲ್ಲೇ ಬಜೆಟ್ ಮಂಡನೆಯಾಗಲಿದ್ದು,ಫೆಬ್ರವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.ಬಜೆಟ್ ಮಂಡನೆ ಬೆನ್ನಲ್ಲೆ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನದ ಬೆಲೆ 60 ಸಾವಿರ ಗಡಿ ದಾಟಿದ್ದು, ಬಂಗಾರದ ಜತೆಗೆ ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು ಕೆ.ಜಿ.ಗೆ 75 ಸಾವಿರ ರೂಪಾಯಿಯಾಗಿದೆ.