25 C
Bengaluru
Monday, December 23, 2024

ಚಿಕ್ಕಮಗಳೂರು: ಪೌತಿ ಖಾತೆಗೆ ಲಂಚ ಪಡೆಯುತ್ತಿದ್ದ ರೆವೆನ್ಯೂ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು, ಫೆ.24: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ವೇಳೆ ಕಂದಾಯ ನಿರೀಕ್ಷಕನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚಿಕ್ಕಮಗಳೂರು ನಗರದ ಶಾಂತಿನಗರದ ಚಿಕ್ಕಮಗಳೂರಿನ ಶಾಂತಿನಗರದ ಮಹಿಳೆಯೋರ್ವರು ತಮ್ಮ ತಂದೆಯ ಹೆಸರಿನಲ್ಲಿದ್ದ ಸುಮಾರು 2 ಎಕರೆ ಜಮೀನನ್ನು ತನ್ನ ಹೆಸರಿಗೆ ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಅಲ್ಲಿನ ಕಂದಾಯ ನಿರೀಕ್ಷಕ ಮಂಜುನಾಥ್ ಮೊದಲಿಗೆ 10 ಸಾವಿರ ಲಂಚ ಪಡೆದಿದ್ದು ನಂತರ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕಂದಾಯ ನಿರೀಕ್ಷಕ ಹಣಕ್ಕೆ ಬೇಡಿಕೆ ಇಟ್ಟಿದ್ದ ಆಡಿಯೋ ತುಣಕಿನೊಂದಿಗೆ ಮಹಿಳೆಯು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶುಕ್ರವಾರ ಆವುತಿ ನಾಡಕಚೇರಿಯಲ್ಲಿ ಆರ್ ಐ ಮಂಜುನಾಥ್ ಅವರು ಮಹಿಳೆಯಿಂದ 25 ಸಾವಿರ ರೂ. ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆಂದು ತಿಳಿದು ಬಂದಿದೆ..ಡಿ ವೈ ಎಸ್ ಪಿ ತಿರುಮಲೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಅನಿಲ್ ರಾಥೋಡ್, ಸಚಿನ್ ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.ಆರೋಪಿಯನ್ನು ಬಂಧಿಸಿದ್ದು ಕಾನೂನಿನ ಪ್ರಕ್ರಿಯೆಗಳನ್ನು ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Related News

spot_img

Revenue Alerts

spot_img

News

spot_img