ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ. ನೌಕರಿ ಖಾಯಂ ಹಾಗೂ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವಂತ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಒಳಗುತ್ತಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರ 30 ದಿನ ಪೂರೈಸಿದೆ ಕಳೆದ 29 ದಿನದಿಂದ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಒಳಗುತ್ತಿಗೆ ನೌಕರಿ ಖಾಯಂ ಮಾಡಿ ಲಿಖಿತ ಆದೇಶ ನೀಡುವವರೆಗೆ ಪ್ರತಿಭಟನೆ ಹಿಂಪಡೆಯಲ್ಲ ಎಂದು ನೌಕರರ ಸಂಘ ಎಚ್ಚರಿಕೆ ನೀಡಿದೆ.ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ವಿರುದ್ದ ಹಲವಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದುವರಿದ ಒಳಗುತ್ತಿಗೆ ಆರೋಗ್ಯ ಸಿಬ್ಬಂದಿಗಳ ಮುಷ್ಕರ 30ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನೌಕರರು ಹೋರಾಟ ತೀವ್ರಗೊಳಿಸಿದ್ದಾರೆ.ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರ, ಸಚಿವರೇ ಹೊಣೆ.
ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರ, ಸಚಿವರೇ ಹೊಣೆ. ಮುಖ್ಯಮಂತ್ರಿಯರು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು , ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ನಾಳೆಯಿಂದ ಎಲ್ಲಾ ಜಿಲ್ಲೆಗಳ ಎನ್ ಹೆಚ್ ಎಂ ಒಳಗುತ್ತಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ . ಪುಟ್ಟ ಪುಟ್ಟ ಕಂದಮ್ಮಗಳೊಂದಿಗೆ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ನೌಕರರು ಸಂಕಷ್ಟ ಒಂದೆಡೆಯಾಗಿದೆ.ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಡಿಸಿ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗೆ ದಯಾಮರಣ ಬರೆಯುತ್ತೇವೆ ನೌಕರರು ಹೇಳಿದ್ಧಾರೆ.ಮನವಿಗೆ ಸ್ಪಂದಿಸದೇ ಹೋದರೆ ವಿಧಾನಸೌದಕ್ಕೆ ಮುತ್ತಿಗೆ ಹಾಕಲಾಗುವುದು,ನೌಕರಿ ಖಾಯಂಗೊಳಿಸುವವರೆಗೆ ಮುಷ್ಕರವನ್ನು ಯಾವದೇ ಕಾರಣಕ್ಕೂ ಬಿಡುವದಿಲ್ಲ ಎಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಆರೋಗ್ಯ ಕಾರ್ಯಕರ್ತರು ಪ್ರತಿಭಟನೆಯ ಎಚ್ಚರಿಕೆ ಕರೆ ನೀಡಿದ್ದಾರೆ.