ಬೆಂಗಳೂರು ಏ.06 : ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಎಎಪಿ ಪಕ್ಷ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅಮೋಘ ಸಾಧನೆ ತೋರಿದ್ದ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಮಾನ್ಯತೆ ದೊರೆಯುವುದುರು ಖಾತರಿಯಾಗಿತ್ತು. ಆದರೆ, ಇಲ್ಲಿಯವರೆಗೂ ಮಾನ್ಯತೆ ನೀಡದಿರುವುದನ್ನು ಪ್ರಶ್ನಿಸಿ ಎಎಪಿ ಅರ್ಜಿ ಸಲ್ಲಿಸಿದೆ.
ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗುವ ಎಲ್ಲಾ ಷರತ್ತುಗಳನ್ನು ಪೂರೈಸಿದ್ದರೂ ರಾಷ್ಟ್ರೀಯ ಸ್ಥಾನಮಾನ ಪಡೆಯಲು ವಿಳಂಬವಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷದ ಮನ್ನಣೆ ಗಳಿಸುವ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ದೊರೆಯಲಿದೆ. ದೆಹಲಿ ಹಾಗೂ ಪಂಜಾಬ್ ನಲ್ಲಿ ಆಡಳಿತ ಚುಕ್ಕಾಣಿ ಹಿಡಿರುವ ಎಎಪಿ ಪಕ್ಷ ಗೋವಾದಲ್ಲಿ ಇಬ್ಬರು ಶಾಸಕರನ್ನು ಹೊಂದಿದೆ. ಇದೀಗ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಪಕ್ಷ ಕಣಕ್ಕಿಳಿಸುತ್ತಿದೆ.