17 C
Bengaluru
Friday, January 24, 2025

ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ:ಸಿಎಂ ಸಿದ್ದರಾಮಯ್ಯ

ಬೆಂಗಳೂರು ಜೂನ್ 23:
ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಆರ್ಥಿಕವಾಗಿ ಬಹಳ ಸಮಸ್ಯೆ ಆಗಿದೆ, 2013 ರಿಂದ 2018ರ ವರೆಗೆ ಇದ್ದ LOC ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದು ಸಂಘದ ಒತ್ತಾಯಿಸಿದ್ದಾರೆ.

ಇನ್ನು ಬಜೆಟ್ ಅಧಿವೇಶನದ ನಂತರ ಬಾಕಿ ಮೊತ್ತ ಬಿಡುಗಡೆಗೆ ಪರಿಶೀಲನೆ ನೆಡಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಅವರು, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು. ಈ ವೇಳೆ ಸಂಘದ ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Related News

spot_img

Revenue Alerts

spot_img

News

spot_img