ಬೆಂಗಳೂರು, (ಆಗಸ್ಟ್ 02):ಆಧಾರ್ ಕಾರ್ಡ್ ಪ್ರತಿಯೊಬ್ಬನಿಗೂ ಮುಖ್ಯವಾಗಿರುತ್ತದೆ. ದೇಶದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು.ಬ್ಯಾಂಕ್‌ನಲ್ಲಿ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯುವವರಗೆ ಎಲ್ಲ ಸಂದರ್ಭಗಳಲ್ಲಿ ಆಧಾರ್ ಕಾರ್ಡ್ ಅಗತ್ಯವಿದೆ.ಆಧಾರ್ ಕಾರ್ಡ್ ಕಳೆದು ಹೋದರೆ ಆಧಾರ್ ಸಂಖ್ಯೆಯನ್ನ ಲಾಕ್ ಮಾಡಬಹುದಾಗಿದೆ. ನಂತರ ಅನ್ಲಾಕ್ ಮಾಡುವ ಮೂಲಕ ಬಳಸಬಹುದಾಗಿದೆ. ಆಧಾರ್ ಕಾರ್ಡ್ ಕಳೆದುಹೋದರೆ, ನೀವು ಮೊಬೈಲ್ ಸಂಖ್ಯೆ ಅಥವಾ ಜಿಮೇಲ್ ಐಡಿ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ಕಂಡುಹಿಡಿಯಬಹುದು ಮತ್ತು ಹೊಸ ಆಧಾರ್ ಕಾರ್ಡ್ ಅನ್ನು ಪಡೆಯಬಹುದು.
ಆಧಾರ್ ಕಾರ್ಡ್ ಕಳೆದು ಹೋದರೆ ಆಧಾರ್ ಸಂಖ್ಯೆಯನ್ನ ಲಾಕ್ ಮಾಡುವ ವಿಧಾನ
*ಯುಐಡಿಐಡಿ ಅಧಿಕೃತ ವೆಬ್ಸೈಟ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಮೊದಲಿಗೆ https://resident.uidai.in/ ಭೇಟಿ ನೀಡಬೇಕು.
*ಆಧಾರ್ ಸಂಖ್ಯೆ (UID)’ ಅಥವಾ ‘ನೋಂದಣಿ ಸಂಖ್ಯೆ (EID)’ ಆಯ್ಕೆಯನ್ನು ಆರಿಸಿ
*ಲಾಕ್ ಅನ್ಬಯೋಮೆಟ್ರಿಕ್ ಆಧಾರ್ ಸರ್ವೀಸ್ ಆಯ್ಕೆ ಕಾಣಿಸುತ್ತದೆ. ನಂತರ ಅದರ ಮೇಲೆ ಕ್ಲಿಕ್ ಮಾಡಿರಿ.
*ಇಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯಂತಹ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ.ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ.
*ಲಾಗ್ ಇನ್ ಆಯ್ಕೆ ಕಾಣಿಸುತ್ತದೆ. ನಂತರ 12 ಅಂಕಿಯ ಆಧಾರ್ ಸಂಖ್ಯೆಯನ್ನ ನಮೂದಿಸಿ
*ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ಸೆಂಡ್ ಓಟಿಪಿ ಆಯ್ಕೆ ಮೇಲೆ ಕ್ಲಿಕ್ ಮಾಡಿ
*ಒಟಿಪಿ ಎಂಟರ್ ಮಾಡಿದ ನಂತರ, ಬಯೋಮೆಟ್ರಿಕ್ ಡೇಟಾವನ್ನು ಲಾಕ್ ಮಾಡುವ ಆಯ್ಕೆ ಕಾಣಿಸುತ್ತದೆ.
*ಬಯೋಮೆಟ್ರಿಕ್ ಡೇಟಾವನ್ನು ಕ್ಲಿಕ್ ಮಾಡಿದರೆ ಆಧಾರ್ ಕಾರ್ಡ್ ಲಾಕ್ ಆಗುತ್ತದೆ.